ನವದೆಹಲಿ : ಬಾಲಿವುಡ್ ನಟಿ ಹಾಗೂ ಪದ್ಮಶ್ರೀ ಕಂಗನಾ ರನೌತ್ (Kangana Ranaut), ತಮ್ಮ ಹೇಳಿಕೆಗಳ ಕಾರಣಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ.  ಇದೀಗ, ಕಂಗನಾ ರನೌತ್, ನೀಡಿರುವ ಹೇಳಿಕೆ ಬಿಜೆಪಿ ಸಂಸದ ವರುಣ್ ಗಾಂಧಿ (Varun Gandhi) ಅವರನ್ನು ಕೆರಳಿಸಿದೆ. ಕಂಗನಾ ಹೇಳಿಕೆಗೆ ಟ್ವೀಟ್ ಮೂಲಕ ವರುಣ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಂಗನಾ ರನೌತ್ ಹೇಳಿಕೆ ಮಹಾತ್ಮಾ ಗಾಂಧಿ, ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅವಮಾನ ಎಂದು ವರುಣ್ ಗಾಂಧಿ ಬಣ್ಣಿಸಿದ್ದಾರೆ.


COMMERCIAL BREAK
SCROLL TO CONTINUE READING

ವರುಣ್ ಗಾಂಧಿ ಟ್ವೀಟ್ : 
ಒಮ್ಮೆ ಮಹಾತ್ಮ ಗಾಂಧಿಯವರ (Mahatma Gandhi) ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಮತ್ತೆ ಗಾಂಧಿಜಿ ಹಂತಕನ ಗೌರವ. ಈಗ ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆಯೇ ತಿರಸ್ಕಾರ. ಇಂಥಹ ಆಲೋಚನೆಯನ್ನು ಹುಚ್ಚುತನ ಎನ್ನಬೇಕೋ ಅಥವಾ ದೇಶದ್ರೋಹ ಎಂದು ಕರೆಯಬೇಕೋ ಎಂದು ಪ್ರಶ್ನಿಸಿ ವರುಣ್ ಗಾಂಧಿ (Varun Gandhi) ಟ್ವೀಟ್ ಮಾಡಿದ್ದಾರೆ. 


PM Kisan: ದ್ವಿಗುಣಗೊಳ್ಳಲಿದೆಯೇ ಪಿಎಂ ಕಿಸಾನ್ ಹಣ? ನಿಮ್ಮ ಕಂತಿನ ಸ್ಥಿತಿಯನ್ನು ಈ ರೀತಿ ಪರಿಶೀಲಿಸಿ


ಇಷ್ಟಕ್ಕೂ ಕಂಗನಾ ಹೇಳಿದ್ದೇನು?
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಬಾಲಿವುಡ್ ನಟಿ ಕಂಗನಾ ರನೌತ್ (Kangana Ranaut),  1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು  ಭಿಕ್ಷೆ ಎಂದು ಹೇಳಿದ್ದರು. ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು 2014 ರಲ್ಲಿ ಎಂದು ಹೇಳಿದ್ದರು. ಅಲ್ಲದೆ, ನಾನು ರಾಷ್ಟ್ರೀಯತೆಯ ಬಗ್ಗೆ ಮಾತನಾಡುವಾಗ, ಸೇನೆಯನ್ನು ಬೆಂಬಲಿಸಿ ಹೇಳಿಕೆ ನೀಡುವಾಗ ಮತ್ತುನಮ್ಮ ಸಂಸ್ಕೃತಿಯನು ಬೆಂಬಲಿಸಿ ಮಾತನಾಡುವಾಗ ನಾನು ಬಿಜೆಪಿಯ (BJP) ಅಜೆಂಡಾವನ್ನು ನಡೆಸುತ್ತಿದ್ದೇನೆ ಎಂದು ಕೆಲವರು ಹೇಳುತ್ತಾರೆ ಎಂದು ಕಂಗನಾ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ (Social media) ನಾನು ಕಲಾವಿದೆಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಇರುತ್ತೇನೆ ಎಂದಿದ್ದಾರೆ. 


ಇದನ್ನೂ ಓದಿ : Padma Shri award 2021 : ಪಾಕ್ ಮಾಜಿ ಸೇನಾಧಿಕಾರಿ ಜಹೀರ್ ಗೆ ಪದ್ಮಶ್ರೀ ಪ್ರಶಸ್ತಿ ಏಕೆ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.