BJP New Parliamentary Board : ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಹೊಸ ಬಿಜೆಪಿ ಸಂಸದೀಯ ಮಂಡಳಿಯನ್ನು ಘೋಷಿಸಿದ್ದಾರೆ. ನಿತಿನ್ ಗಡ್ಕರಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಅವರ ಹೆಸರನ್ನು ಬಿಜೆಪಿ ಸಂಸದೀಯ ಮಂಡಳಿಯಿಂದ ಕೈ ಬಿಡಲಾಗಿದೆ. ಜೆಪಿ ನಡ್ಡಾ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇದಲ್ಲದೇ ಬಿಜೆಪಿ ಸಂಸದೀಯ ಮಂಡಳಿಗೆ ಸುಧಾ ಯಾದವ್, ಬಿ.ಎಲ್.ಸಂತೋಷ್ ಅವರ ಹೊಸ ಹೆಸರುಗಳನ್ನೂ ಸೇರ್ಪಡೆ ಮಾಡಲಾಗಿದೆ. ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಒಟ್ಟು 11 ಸದಸ್ಯರಿದ್ದಾರೆ.


COMMERCIAL BREAK
SCROLL TO CONTINUE READING

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಹೊಸದಾಗಿ ಈ ನಾಯಕರಿಗೆ ಸ್ಥಾನ 


ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಜೆಪಿ ನಡ್ಡಾ ಅವರಲ್ಲದೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್, ಕೆ ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸುಧಾ ಯಾದವ್, ಸತ್ಯನಾರಾಯಣ್ ಜಟಿಯಾ ಮತ್ತು ಬಿಎಲ್ ಸಂತೋಷ್ ಅವರ ಹೆಸರನ್ನು ಸೇರಿಸಲಾಗಿದೆ. ಬಿ.ಎಲ್.ಸಂತೋಷ್ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿಯಾಗಿದ್ದಾರೆ.


ಇದನ್ನೂ ಓದಿ : Super Vasuki: ಭಾರತದ ಅತಿ ಉದ್ದದ ರೈಲಿನ ಬಗ್ಗೆ ನಿಮಗೆಷ್ಟು ಗೊತ್ತು..?


ಗಡ್ಕರಿ ಮತ್ತು ಶಿವರಾಜ್ ಪಟ್ಟಿಯಿಂದ ಔಟ್


ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿ ಸಂಸದೀಯ ಮಂಡಳಿಯನ್ನು ರಚಿಸಿದ್ದಾರೆ. ಮಂಡಳಿಯಲ್ಲಿ 11 ಸದಸ್ಯರಿಗೆ ಸ್ಥಾನ ನೀಡಲಾಗಿದೆ. ಆದರೆ, ಹಳೆಯ ಸದಸ್ಯರಾದ ನಿತಿನ್ ಗಡ್ಕರಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಈ ಪಟ್ಟಿಯಿಂದ ಕೈಬಿಡಲಾಗಿದೆ.


ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಕೂಡ ಪ್ರಕಟಿಸಿದೆ


ಇಂದು ಬಿಜೆಪಿಯಿಂದ ಕೇಂದ್ರ ಚುನಾವಣಾ ಸಮಿತಿಯನ್ನು ಘೋಷಿಸಲಾಗಿದೆ. ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸುಧಾ ಯಾದವ್, ಸತ್ಯನಾರಾಯಣ್ ಜಟಿಯಾ, ಭೂಪೇಂದ್ರ ಯಾದವ್, ದೇವೇಂದ್ರ ಫಡ್ನವಿಸ್, ಓಂ ಮಾಥುರ್, ಬಿಎಲ್ ಸಂತೋಷ್ ಮತ್ತು ವನತಿ ಅವರ ಹೆಸರುಗಳು ಸೇರಿವೆ.


ಇದನ್ನೂ ಓದಿ : ರಕ್ಕಮ್ಮನಿಗೆ ಸಂಕಷ್ಟ: ಜಾಕ್ವೆಲಿನ್ ವಿರುದ್ಧ ಚಾರ್ಜ್ ಶೀಟ್ ಫೈಲ್, ಬಂಧನದ ಸುಳಿಯಲ್ಲಿ ನಟಿ?


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.