BJP Protest aginst Mamata Banerjee Govt : ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಕೋಲ್ಕತ್ತಾ ಸೇರಿದಂತೆ ಬಂಗಾಳದ ಹಲವು ನಗರಗಳಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆಗಿಳಿದು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ಕೃತ್ಯಕ್ಕೆ ತಿರುಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಮತ್ತು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ. ಇದಲ್ಲದೇ ಬಿಜೆಪಿ ಶಾಸಕ ಶಿವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಫೈಟ್
ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಇಲ್ಲಿ ಬಿಜೆಪಿ ಕಾರ್ಯಕರ್ತರು ಮಮತಾ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಅಷ್ಟರಲ್ಲಿ ಟಿಎಂಸಿ ನಾಯಕರೂ ಆಗಮಿಸಿದ್ದು ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಟಿಎಂಸಿ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.
West Bengal | State BJP chief Sukanta Majumdar arrested amid BJP's 'Nabanna Chalo' protest against the state government, in Kolkata
CM's scared, ran away after seeing the strength of the people gathered here; only 30% are here today, some of the rest were detained y'day, he said pic.twitter.com/M06AV7CQ58
— ANI (@ANI) September 13, 2022
ಇದನ್ನೂ ಓದಿ : Mukul Rohatgi : ಎರಡನೇ ಭಾರಿಗೆ 'ಅಟಾರ್ನಿ ಜನರಲ್' ಆಗಿ ಮುಕುಲ್ ರೋಹಟಗಿ ಆಯ್ಕೆ!
ಸೆಕ್ರೆಟರಿಯೇಟ್ ಬಳಿ ಹೆಚ್ಚಿನ ಪೊಲೀಸ್ ಭದ್ರತೆ
ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದು, ಕೋಲ್ಕತ್ತಾ ಸೇರಿದಂತೆ ಹಲವು ನಗರಗಳಲ್ಲಿ ಹೋರಾಟ ಆರಂಭಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಕಾರ್ಯಕ್ಷಮತೆಯನ್ನು ಗಮನದಲ್ಲಿಟ್ಟುಕೊಂಡು ಕೋಲ್ಕತ್ತಾದ ಸೆಕ್ರೆಟರಿಯೇಟ್ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ಬ್ಯಾರಿಕೇಡ್ ಹಾಕಲಾಗಿದೆ. ಇದೇ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಘರ್ಷಣೆ ವೇಳೆ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.
West Bengal | Police vehicle torched amid BJP's 'Nabanna Chalo' march against the state government, in Kolkata pic.twitter.com/e6jqE3VIEs
— ANI (@ANI) September 13, 2022
ಇದನ್ನೂ ಓದಿ : Mehbooba Mufti : ಜ್ಞಾನವಾಪಿ ಬಗ್ಗೆ ನ್ಯಾಯಾಲಯ ತೀರ್ಪ : ವಿವಾದಾತ್ಮಕ ಹೇಳಿಕೆ ನೀಡಿದ ಮೆಹಬೂಬಾ ಮುಫ್ತಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.