ನವದೆಹಲಿ: ಮುಂಬರಲಿರುವ ಛತ್ತೀಸ್ಗಡ ವಿಧಾನಸಭಾ ಚುನಾವಣೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.


COMMERCIAL BREAK
SCROLL TO CONTINUE READING

'ಅಟಲ್ ಸಂಕಲ್ಪ ಪತ್ರ' ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಅಮಿತ್ ಷಾ, ಮುಖ್ಯಮಂತ್ರಿ ರಮಣ ಸಿಂಗ್ ಅವರ ಕಾರ್ಯವನ್ನು ಶ್ಲಾಘಿಸಿದರು. 


ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಷಾ, ಛತ್ತೀಸ್ಗಢದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ನಕ್ಸಲರನ್ನು ಹಾಗೂ ಅವರ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟ ಹಾಕಿದೆ. ರಾಜ್ಯದ ಅಭಿವೃದ್ಧಿಗಾಗಿ ಸಾಕಷ್ಟು ಪರಿಶ್ರಮ ಪಡಲಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗಿದೆ ಎಂದು ಹೇಳಿದರು. 


ಕೌಶಲ್ಯ ಅಭಿವೃದ್ಧಿಗೆ ಶಾಸನವನ್ನು ಹೊಂದಿರುವ ಮೊದಲ ರಾಜ್ಯ, ಹಾಗೆಯೇ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿದ ಮೊದಲ ರಾಜ್ಯ ಸಹ ಛತ್ತೀಸ್ಗಢವಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಕಲ್ಯಾಣ ಯೋಜನೆಗಳನ್ನು ಕೈಗೊಂಡಿದೆ. ಮನ್ರೇಗಾ ಯೋಜನೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಲಾಗಿದೆ ಎಂದು ಅಮಿತ್ ಷಾ ಹೇಳಿದರು.


ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ರಮಣ ಸಿಂಗ್, ಪತ್ರಕರ್ತರ ಅಭಿವೃದ್ಧಿಗಾಗಿ ಪತ್ರಕರ್ತ ಕ್ಲಯಾನ ಮಂಡಳಿ ರಚಿಸಲಾಗುವುದು. ಮಹಿಳೆಯರಿಗೆ ಸ್ವ ಉದ್ಯೋಗ ಆರಂಭಿಸಲು 2 ಲಕ್ಷ ರೂ.ಗಳವರೆಗೆ ಬದ್ದಿರಹಿತ ಸಾಲ ನೀಡಿಕೆ, ಛತ್ತೀಸಗಡದಲ್ಲಿ ಫಿಲಂ ಸಿಟಿ ನಿರ್ಮಾಣ ಮತ್ತು 12ನೇ ತರಗತಿವರೆಗೆ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ಮತ್ತು ಸಮವಸ್ತ್ರ ನೀಡಲಾಗುವುದು ಎಂದು ಹೇಳಿದರು.