ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಪ್ರಮುಖ ಭರವಸೆಗಳಿವು...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ 'ಸಂಕಲ್ಪ ಪತ್ರ' ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಸಂಕಲ್ಪ ಪತ್ರದಲ್ಲಿ, 1 ಕೋಟಿ ಜನರಿಗೆ ಉದ್ಯೋಗ ಒದಗಿಸುವುದು, 2022 ರ ವೇಳೆಗೆ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದು, ರೈತರಿಗೆ 12 ಗಂಟೆಗಳ ವಿದ್ಯುತ್ ಒದಗಿಸುವಂತಹ ಅನೇಕ ಜನಪ್ರಿಯ ಭರವಸೆಗಳನ್ನು ಸಾರ್ವಜನಿಕರಿಗೆ ನೀಡಲಾಗಿದೆ.

Last Updated : Oct 15, 2019, 11:43 AM IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಪ್ರಮುಖ ಭರವಸೆಗಳಿವು... title=

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ 'ಸಂಕಲ್ಪ ಪತ್ರ' ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಸಂಕಲ್ಪ ಪತ್ರದಲ್ಲಿ, 1 ಕೋಟಿ ಜನರಿಗೆ ಉದ್ಯೋಗ ಒದಗಿಸುವುದು, 2022 ರ ವೇಳೆಗೆ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದು, ರೈತರಿಗೆ 12 ಗಂಟೆಗಳ ವಿದ್ಯುತ್ ಒದಗಿಸುವಂತಹ ಅನೇಕ ಜನಪ್ರಿಯ ಭರವಸೆಗಳನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಮಹಾನ್ ಸಾಮಾಜಿಕ ಸುಧಾರಕ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಮತ್ತು ಸಾವರ್ಕರ್ ಅವರಿಗೆ 'ಭಾರತ ರತ್ನ' ನೀಡಲು ಬಿಜೆಪಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ಸಂಕಲ್ಪ ಪತ್ರವು ಕೇವಲ ಪತ್ರವಲ್ಲ. ಇದು ಪ್ರತಿಯೊಬ್ಬರ ಅಭಿವೃದ್ಧಿ, ಎಲ್ಲರ ನಂಬಿಕೆ ಎಂದು ಹೇಳಿದರು.

ಸಂಕಲ್ಪ ಪತ್ರದ ಪ್ರಮುಖ ಭರವಸೆಗಳು:
- ಮುಂದಿನ ಐದು ವರ್ಷಗಳಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ.
- ಮುಂದಿನ 5 ವರ್ಷಗಳವರೆಗೆ ಕೃಷಿಯಲ್ಲಿ ಬಳಸುವ ವಿದ್ಯುತ್ ಸೌರಶಕ್ತಿಯನ್ನು ಆಧರಿಸಿರುತ್ತದೆ ಮತ್ತು ರೈತರಿಗೆ 12 ಗಂಟೆಗಳಿಗಿಂತ ಹೆಚ್ಚಿನ ವಿದ್ಯುತ್ ಒದಗಿಸಲಾಗುವುದು.
- 2022 ರ ವೇಳೆಗೆ 5 ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಹೂಡಿಕೆ ಮಾಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ.
- ಮುಂಬರುವ 5 ವರ್ಷಗಳಲ್ಲಿ ನಾವು ಮಹಾರಾಷ್ಟ್ರವನ್ನು ಬರಗಾಲದಿಂದ ಮುಕ್ತಗೊಳಿಸುತ್ತೇವೆ.
- ಗೋದಾವರಿ ಕಣಿವೆಯಿಂದ ಪಶ್ಚಿಮದಿಂದ ಹರಿಯುವ ನದಿಗಳ ನೀರನ್ನು ನಾವು ನಿಲ್ಲಿಸಿ ಮರಾಠವಾಡ ಮತ್ತು ಉತ್ತರ ಮಹಾರಾಷ್ಟ್ರದ ಬರ ಪೀಡಿತ ಭಾಗಕ್ಕೆ ಸಾಗಿಸುತ್ತೇವೆ.
- ಮೂಲ ಸೌಕರ್ಯಗಳಿಗಾಗಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 5 ಲಕ್ಷ ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಾಗುವುದು.
- ಮುಖ್ಯಮಂತ್ರಿಗಳ ಗ್ರಾಮ ಸಡಕ್ ಯೋಜನೆ ಮೂಲಕ, ಎಲ್ಲಾ ವಸಾಹತುಗಳನ್ನು 12 ತಿಂಗಳವರೆಗೆ ಚಲಿಸುವ ರಸ್ತೆಗಳಿಗೆ ಸಂಪರ್ಕಿಸಲಾಗುವುದು.
- ಗ್ರಾಮ ಸಡಕ್ ಯೋಜನೆಯ ಎರಡನೇ ಹಂತದ ಮೂಲಕ 30 ಸಾವಿರ ಕಿ.ಮೀ ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲಾಗುವುದು.
- ಇಂಡಿಯಾ ನೆಟ್ ಮತ್ತು ಮಹಾರಾಷ್ಟ್ರ ನೆಟ್ ಮೂಲಕ ಇಡೀ ಮಹಾರಾಷ್ಟ್ರವನ್ನು ಇಂಟರ್‌ನೆಟ್‌ಗೆ ಸಂಪರ್ಕಿಸುವುದು ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.
 

Trending News