ಮಹಾರಾಷ್ಟ್ರ, ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಸರ್ಕಾರ ರಚಿಸಲಿದೆ: ಅಮಿತ್ ಶಾ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ + ಶಿವಸೇನೆ ಮೈತ್ರಿ ಗೆಲುವು ಸಾಧಿಸಿದರೆ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಕೆಲವು ಸ್ಥಾನಗಳಿಂದ ದೂರ ಉಳಿದಿದೆ. ಆದರೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

Last Updated : Oct 25, 2019, 08:54 AM IST
ಮಹಾರಾಷ್ಟ್ರ, ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಸರ್ಕಾರ ರಚಿಸಲಿದೆ: ಅಮಿತ್ ಶಾ title=

ನವದೆಹಲಿ: ವಿಧಾನಸಭಾ ಚುನಾವಣಾ 2019ರ ಫಲಿತಾಂಶ ಗುರುವಾರ ಹೊರಬಂದಿದೆ. ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಟ್ವೀಟ್ ಮಾಡಿರುವ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಸರ್ಕಾರ ರಚಿಸಲಿದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ + ಶಿವಸೇನೆ ಮೈತ್ರಿ ಗೆಲುವು ಸಾಧಿಸಿದರೆ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಕೆಲವು ಸ್ಥಾನಗಳಿಂದ ದೂರ ಉಳಿದಿದೆ. ಆದರೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಏತನ್ಮಧ್ಯೆ, ದುಶ್ಯಂತ್ ಚೌತಲಾ ಅವರ ಪಕ್ಷ ಜನನಾಯಕ್ ಜನತಾ ಪಕ್ಷ (ಜೆಜೆಪಿ) ಬಿಜೆಪಿಯನ್ನು ಬೆಂಬಲಿಸಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಮಹಾರಾಷ್ಟ್ರ ಮತ್ತು ಹರಿಯಾಣ ಎರಡರಲ್ಲೂ ಬಿಜೆಪಿ ಸರ್ಕಾರ ರಚಿಸಲಿದೆ ಎಂಬುದು ಸ್ಪಷ್ಟವಾಗಿದೆ. 

'ಬಿಜೆಪಿ-ಶಿವಸೇನೆ ಮೈತ್ರಿಕೂಟದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಕ್ಕಾಗಿ ಮಹಾರಾಷ್ಟ್ರದ ಜನರಿಗೆ ಅಭಿನಂದನೆಗಳು ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಪಿಎಂ ಮೋದಿಯವರ ನೇತೃತ್ವದಲ್ಲಿ ಮಹಾರಾಷ್ಟ್ರ ಸರ್ಕಾರ ರಾಜ್ಯದ ಪ್ರಗತಿಗೆ ಸಮರ್ಪಣೆ ಮತ್ತು ಜನರಿಗೆ ಸೇವೆ ಮುಂದುವರಿಸಲಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಚಂದ್ರಕಾಂತ್ ಪಾಟೀಲ್ ಸೇರಿದಂತೆ ಎಲ್ಲರಿಗೂ ಅಭಿನಂದನೆಗಳು ಎಂದು ಶಾ ಟ್ವೀಟ್ ಮಾಡಿದ್ದಾರೆ.

ಇದರ ಬೆನ್ನಲ್ಲೇ ಇನ್ನೊಂದು ಟ್ವೀಟ್ ಮಾಡಿರುವ ಅಮಿತ್ ಶಾ, 'ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಕೇಂದ್ರ ನಾಯಕತ್ವದಲ್ಲಿ ಖಟ್ಟರ್ ಸರ್ಕಾರ ಹರಿಯಾಣ ಜನರ ಕಲ್ಯಾಣಕ್ಕಾಗಿ ಎಲ್ಲ ಪ್ರಯತ್ನಗಳನ್ನು ಮಾಡಿತು. ಬಿಜೆಪಿಯನ್ನು ಅತಿದೊಡ್ಡ ಪಕ್ಷವನ್ನಾಗಿ ಮಾಡಿ ಮತ್ತೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಸಾರ್ವಜನಿಕರನ್ನು ನಾನು ಅಭಿನಂದಿಸುತ್ತೇನೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಸುಭಾಷ್ ಬರಾಲಾ ಸೇರಿದಂತೆ ಎಲ್ಲರಿಗೂ ಅಭಿನಂದನೆಗಳು ಎಂದು ಬರೆದಿದ್ದಾರೆ. ಅಮಿತ್ ಷಾ ಅವರ ಈ ಎರಡೂ ಟ್ವೀಟ್‌ಗಳು ಎರಡೂ ರಾಜ್ಯಗಳಲ್ಲಿ ಬಿಜೆಪಿಗೆ ನಿರೀಕ್ಷೆಯಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ, ಆದರೆ ಸರ್ಕಾರ ರಚಿಸಲಿದೆ ಎಂದು ದೃಢಪಡಿಸಿವೆ.

ಮಹಾರಾಷ್ಟ್ರದಲ್ಲಿ ಬಿಜೆಪಿ + ಶಿವಸೇನೆ ಇದುವರೆಗಿನ ಚುನಾವಣಾ ಫಲಿತಾಂಶಗಳಲ್ಲಿ 160 ಸ್ಥಾನಗಳನ್ನು ಗೆದ್ದಿವೆ. ಮಹಾರಾಷ್ಟ್ರದಲ್ಲಿ 288 ವಿಧಾನಸಭಾ ಸ್ಥಾನಗಳೊಂದಿಗೆ ಕಾಂಗ್ರೆಸ್ + ಎನ್‌ಸಿಪಿ 108 ಸ್ಥಾನಗಳಲ್ಲಿ ಗೆದ್ದಿದೆ. ಅಂತಹ ಪರಿಸ್ಥಿತಿಯಲ್ಲಿ, ಶಿವಸೇನೆ ತನ್ನದೇ ಆದ ಷರತ್ತಿನ ಮೇಲೆ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಸರ್ಕಾರವನ್ನು ರಚಿಸುವ ಒಂದು ಆಯ್ಕೆ ಇದೆ. ಮೊದಲ ಬಾರಿಗೆ ಆದಿತ್ಯ ಠಾಕ್ರೆ ಠಾಕ್ರೆ ಕುಟುಂಬದ ಪರವಾಗಿ ಸ್ಪರ್ಧಿಸಿದ್ದಾರೆ. ಆದಿತ್ಯ ಠಾಕ್ರೆ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿಯನ್ನಾಗಿ ಮಾಡಲು ಶಿವಸೇನೆ ಚಿಂತನೆ ನಡೆಸಿದೆ ಎನ್ನಲಾಗಿದೆ.

Trending News