ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 2014ಕ್ಕಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲಿದೆ- ಸಿಎಂ ಯೋಗಿ

ವಿರೋಧ ಪಕ್ಷಗಳ ಮೈತ್ರಿ ಒಂದು ಸವಾಲಾಗಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು. 

Last Updated : Mar 11, 2019, 01:47 PM IST
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 2014ಕ್ಕಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲಿದೆ- ಸಿಎಂ ಯೋಗಿ title=
File Image

ಲಕ್ನೋ: 2019 ರ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಭಾನುವಾರ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಈ ಬಾರಿ ಲೋಕಸಭಾ ಚುನಾವಣೆ 7 ಹಂತಗಳಲ್ಲಿ ನಡೆಯಲಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ದಿನಾಂಕ ಘೋಷಿಸಿರುವುದನ್ನು ಸ್ವಾಗತಿಸಿದ್ದಾರೆ. ಈ ವೇಳೆ ವಿರೋಧ ಪಕ್ಷಗಳನ್ನು ಗುರಿಪಡಿಸಿ 'ಚೋಕಿದಾರ್'(ಕಾವಲುಗಾರನು) ಒಂದು ಸಿಂಹ, ಕಳ್ಳನಲ್ಲ ಎಂದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಮತ್ತೆ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಅಭಿವೃದ್ಧಿಯ ಉತ್ತಮ ಆಡಳಿತದ ಅಡಿಪಾಯವನ್ನು ಮುಂದುವರಿಸಲಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 2014ಕ್ಕಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಪ್ರಧಾನಿ ಹುದ್ದೆಗೆ ಮೋದಿಯವರಿಗಿಂತ ಉತ್ತಮ ಆಯ್ಕೆ ಬೇರೆಯಿಲ್ಲ ಎಂದರು.

ಇದೇ ವೇಳೆ ವಿರೋಧ ಪಕ್ಷಗಳ ಮೈತ್ರಿ ಒಂದು ಸವಾಲಾಗಿಲ್ಲ ಎಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿ ವಿರೋಧಿ ಪಕ್ಷಗಳು ಘೋರ, ಅಸ್ತವ್ಯಸ್ತತೆ, ಲೂಟಿ ಮತ್ತು ಅಪರಾಧಿಗಳಿಗೆ ರಕ್ಷಣೆ ನೀಡುತ್ತಿವೆ ಎಂದು ಆರೋಪಿಸಿದರು. ವಿರೋಧ ಪಕ್ಷವು ದೇಶ ಮತ್ತು ರಾಜ್ಯವನ್ನು ಹಾಳು ಮಾಡಿದೆ. ರಾಜ್ಯದ ಜನರು ತಮ್ಮ ಭ್ರಷ್ಟಾಚಾರ ಮತ್ತು ವಿನಾಶವನ್ನು ತಿಳಿದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಅಭಿವೃದ್ಧಿ, ಉತ್ತಮ ಆಡಳಿತ ಮತ್ತು ರಾಷ್ಟ್ರೀಯತೆ ವಿಷಯದಲ್ಲಿ  ಸ್ಪರ್ಧಿಸಲಿದೆ ಎಂದ ತಿಳಿಸಿದ ಯೋಗಿ ಆದಿತ್ಯನಾಥ್, ರಾಮ ಮಂದಿರ ನಮ್ಮ ನಂಬಿಕೆಯ ವಿಷಯ, ಅದನ್ನು ಗೌರವಿಸಬೇಕು. ಈ ನಂಬಿಕೆಯನ್ನು ಗೌರವಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಅವರು ಹೇಳಿದರು.

ಪ್ರಿಯಾಂಕಾ ಸಕ್ರಿಯ ರಾಜಕೀಯ ಪ್ರವೇಶದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಯೋಗಿ, ಪ್ರಿಯಾಂಕಾ ರಾಜಕೀಯ ಪ್ರವೇಶದಿಂದ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿದರು. 
 

Trending News