ನವದೆಹಲಿ : ಉತ್ತರಪ್ರದೇಶದಲ್ಲಿ ಇಂದು ನಡೆದ ಸ್ಥಳೀಯ ಸಂಸ್ಥೆಗಳಿಗೆ ಮೂರು ಹಂತಗಳಲ್ಲಿ ಚುನಾವಣೆಯಲ್ಲಿ 16 ಮಹಾನಗರಪಾಲಿಕೆಗಳ ಪೈಕಿ 14 ಸ್ಥಾನಗಳಲ್ಲಿ ಬಿಜೆಪಿ ತನ್ನ ಎದುರಾಳಿಗಳನ್ನು ಸೋಲಿಸುವ ಮೂಲಕ ಭರ್ಜರಿ ಜಯ ಸಾಧಿಸಿದೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟ, ರಾಹುಲ್ ಗಾಂಧಿ ಪ್ರತಿನಿಧಿಸುತ್ತಿರುವ ಅಮೇಥಿಯಲ್ಲಿಯೂ ಕಾಂಗ್ರೆಸ್‌ ಮುಖಭಂಗ ಅನುಭವಿಸಿದ್ದು, ಅಮೇಥಿ ನಗರ ಪಂಚಾಯತಿ ಚುನಾವಣೆಯಲ್ಲಿ ಸೋಲು ಅನುಭವಿಸಿದೆ. 


ಮಾಯಾವತಿ ನೇತೃತ್ವದ ಸಮಾಜವಾದಿ ಪಕ್ಷವೂ ಮೊದಲ ಹಂತದ ಮತ ಎಣಿಕೆಯಲ್ಲಿ ನಾಲ್ಕು ಸ್ಥಾನಗಳಲ್ಲಿ ಮುಂಚೂಣಿಯಲ್ಲಿತ್ತಾದರೂ ಈ ಚುನಾವಣೆಯಲ್ಲಿ ತನ್ನ ಅಸ್ತಿತ್ವ ತೋರುವಲ್ಲಿ ವಿಫಲವಾಗಿದೆ.


ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ಸಾಧಿಸಿದ್ದು, ಈ ಫಲಿತಾಂಶ ಯೋಗಿ ಸರಕಾರಕ್ಕೆ ನೀಡಿರುವ ಜನಾದೇಶವೆಂದು ಪರಿಗಣಿಸಲಾಗುತ್ತಿದೆ.