'ಅನುದಾನ ನೀಡದೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಿದ್ದೆ ಬಿಜೆಪಿ ಸಾಧನೆ'

 ಅನುದಾನ ನೀಡದೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಿದ್ದೆ ಬಿಜೆಪಿ ಸಾಧನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

Written by - Zee Kannada News Desk | Last Updated : Dec 4, 2021, 04:31 AM IST
  • ಅನುದಾನ ನೀಡದೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಿದ್ದೆ ಬಿಜೆಪಿ ಸಾಧನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.
'ಅನುದಾನ ನೀಡದೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಿದ್ದೆ ಬಿಜೆಪಿ ಸಾಧನೆ' title=

ಬೆಂಗಳೂರು:  ಅನುದಾನ ನೀಡದೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಿದ್ದೆ ಬಿಜೆಪಿ ಸಾಧನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದರೂ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮಾಡದೆ ಜನಸ್ವರಾಜ್ ಯಾತ್ರೆ ಮಾಡಿ ಏನು ಫಲ?  ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ : ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆಯೇ ಇಮ್ರಾನ್ ಖಾನ್ ಬಗ್ಗೆ ಸಿಧು ನೀಡಿದ ಹೇಳಿಕೆ?

'ಮೊದಲು ತಮ್ಮ ಸರ್ವಾಧಿಕಾರಿ ಮನಸ್ಥಿತಿ ಬದಲಿಸಿಕೊಂಡು ಅಧಿಕಾರ ವಿಕೇಂದ್ರೀಕರಣದ ಕಡೆಗೆ ಕೆಲಸ ಮಾಡಲಿ.ಚುನಾವಣೆ ನಡೆಸಲು ಬಿಜೆಪಿಯವರಿಗೆ ಭಯ. ಹೀಗಾಗಿ ಚುನಾವಣೆ ಮುಂದೂಡಲು ಬೇಕಂತಲೇ ವಿವಾದಾತ್ಮಕ ಕಾನೂನು ತಂದಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ ಇದ್ದಿದ್ದರೆ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಮುಂದೂಡುತ್ತಿರಲಿಲ್ಲ" ಎಂದು ಹೇಳಿದರು.

ನರೇಂದ್ರ ಮೋದಿಯವರು ಪ್ರಧಾನಿಯಾಗಿ ಎಂಟು ವರ್ಷಗಳಾದರೂ ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಬಲ ತುಂಬಲಿಲ್ಲ, ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಲು ಯಾವುದೇ ಕಾರ್ಯಕ್ರಮ ರೂಪಿಸಲಿಲ್ಲ.  ಅಭಿವೃದ್ಧಿ ಕೆಲಸ ಮಾಡದೆ ಜನಸ್ವರಾಜ್ ಯಾತ್ರೆ ನಡೆಸಲು ನೈತಿಕ ಹಕ್ಕು ಇದೆಯಾ? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ-ಆತಂಕ ಹೆಚ್ಚಿಸುತ್ತಿದೆ 'ಓಮಿಕ್ರಾನ್', ಪ್ರಯಾಣ ನಿಯಮಗಳನ್ನು ಬಿಗಿಗೊಳಿಸಿದ ಭಾರತ, COVID ನೆಗೆಟಿವ್ ವರದಿ ಕಡ್ಡಾಯ

ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ನೀಡಿದ್ದು ಕಾಂಗ್ರೆಸ್ ಪಕ್ಷ. ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ಕಾಯಿದೆಗೆ ತಿದ್ದುಪಡಿ ತಂದರು. ಅದನ್ನು ನರಸಿಂಹರಾವ್ ಅವರ ಸರ್ಕಾರ ಜಾರಿಗೊಳಿಸಿತು.ಅನುದಾನ ನೀಡದೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಿದ್ದೆ ಬಿಜೆಪಿ ಸಾಧನೆ ಎಂದು ಟೀಕಿಸಿದರು. 

ಇದನ್ನೂ ಓದಿ : Viral Video: ಜಿಮ್‌ನಲ್ಲಿ ಗೆಳತಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಹೆಂಡತಿಗೆ ಸಿಕ್ಕಿಬಿದ್ದ ಪತಿರಾಯ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News