ನವದೆಹಲಿ: ಜಮ್ಮುವಿನ ಬಿಷ್ನಾಹ್‌ನ ಲಾಲಿಯನ್‌ ಗ್ರಾಮದ ಬಯಲು ಪ್ರದೇಶದಲ್ಲಿ ಇಂದು ಬೆಳಗ್ಗೆ ಸ್ಪೋಟವೊಂದು ಸಂಭವಿಸಿದೆ. ಜಮ್ಮು ಕಾಶ್ಮೀರ ಪೊಲೀಸರು ತನಿಖೆ ಕೈಗೊಂಡಿದ್ದು, ಸಿಡಿಲು ಅಪ್ಪಳಿಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ.  ಇಂದು ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಸ್ಪೋಟ ಸಂಭವಿಸಿದ 12 ಕಿ.ಮೀ ದೂರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿ ಇಂದು ನಡೆಯಲಿದೆ. ಈ ಸಂದರ್ಭದಲ್ಲಿ ಶಂಕಿತ ಸ್ಪೋಟ ಸಂಭವಿಸಿದ್ದು ಭೀತಿ ಹೆಚ್ಚಾಗಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: PM Narendra Modi : ಪ್ರಧಾನಿ ಮೋದಿಗೆ 'ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ'


ಪ್ರಧಾನಿ ಜಮ್ಮು ಭೇಟಿ: 
ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ದೇಶಾದ್ಯಂತ ಗ್ರಾಮ ಸಭೆಗಳನ್ನು ಉದ್ದೇಶಿಸಿ ಅವರು ಮಾತನಾಡಿಲಿದ್ದಾರೆ. 


20,000 ಕೋಟಿಗೂ ಅಧಿಕ ಮೊತ್ತದ ಬಹು ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ಗೆ ಸಹ ಅವರು ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. 


ಇದನ್ನು ಓದಿ: ಇಂದು ಜಮ್ಮು ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ : ಎಲ್ಲೆಡೆ ಕಟ್ಟೆಚ್ಚರ


ವಿಧಿ ರದ್ಧತಿ ಬಳಿಕ ಮೊದಲ ಭೇಟಿ: 
370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಭೇಟಿಯಾಗಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ  ಎಲ್ಲಾ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸ್ಥಳಗಳಲ್ಲಿ ಚೆಕ್ ಪಾಯಿಂಟ್‌ಗಳನ್ನು ಇರಿಸಲಾಗಿದೆ. ಇದಲ್ಲದೇ ಕಳೆದ ಎರಡು ದಿನಗಳಿಂದ ಕಾಶ್ಮೀರದ ವಿವಿಧೆಡೆ ತಪಾಸಣೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.