Gujarat GSEB Exams Exam 2021 canceled: ದಿನೇ ದಿನೇ ತಾರಕಕ್ಕೇರುತ್ತಿರುವ ಕರೋನಾವೈರಸ್ ಪ್ರಕರಣಗಳನ್ನು  ಗಮನದಲ್ಲಿಟ್ಟುಕೊಂಡು ಗುಜರಾತ್‌ನಲ್ಲಿ 10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.


COMMERCIAL BREAK
SCROLL TO CONTINUE READING

ಕರೋನಾವೈರಸ್ (Coronavirus) ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವ ಗುಜರಾತ್ ರಾಜ್ಯ ಸರ್ಕಾರ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲು ತೀರ್ಮಾನಿಸಿದೆ.


ಇದನ್ನೂ ಓದಿ - Covid-19: WhatsApp, Telegram ಬಳಸಿ ಕರೋನಾ ಲಸಿಕೆ ಪಡೆಯಿರಿ, ಹೇಗೆಂದು ತಿಳಿಯಿರಿ


ಸರ್ಕಾರದ ಪ್ರಕಟಣೆಯ ಪ್ರಕಾರ, ಕರೋನಾವೈರಸ್ ನಿಗ್ರಹಿಸುವ ನಿಟ್ಟಿನಲ್ಲಿ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗುಜರಾತ್ (Gujarat) ಪ್ರೌಢ ಶಿಕ್ಷಣ ಮಂಡಳಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು  ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ - Black Fungus: ಈ 10 ರಾಜ್ಯಗಳಲ್ಲಿ ಬ್ಲಾಕ್ ಫಂಗಸ್ ಹಾವಳಿ, ಅದರ ಲಕ್ಷಣಗಳ ಬಗ್ಗೆ ಇರಲಿ ಎಚ್ಚರ


ಮಾಹಿತಿಯ ಪ್ರಕಾರ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದು ಮತ್ತೆ ಈ ವರ್ಷ ಮತ್ತೆ ಪರೀಕ್ಷೆಗೆ ತಯಾರಿ ನಡೆಸಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಬಗ್ಗೆ ಕೋವಿಡ್ -19 ಪ್ರಕರಣಗಳು ಕಡಿಮೆಯಾದ ನಂತರ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧರಿಸಲಾಗುವುದು ಎಂದು ತಿಳಿದುಬಂದಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.