Board Exams: ಪಂಜಾಬ್ ಮತ್ತು ರಾಜಸ್ಥಾನದ ಮಾದರಿಯಲ್ಲಿ, ಈಗ ಹರಿಯಾಣ ಕೂಡ 5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಾಗಿ ಘೋಷಿಸಿದೆ. ಈ ಕುರಿತು ಅಧಿಕೃತ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಅಧಿಸೂಚನೆಯ ಪ್ರಕಾರ, 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಂತೆ, ಈಗ 5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಆಯೋಜಿಸಲಾಗುತ್ತದೆ. ಹೊಸ ಆದೇಶವು ಹರಿಯಾಣ ಶಾಲಾ ಶಿಕ್ಷಣ ಮಂಡಳಿಗೆ (BSEH) ಸಂಯೋಜಿತವಾಗಿರುವ ಅದು ಖಾಸಗಿ ಅಥವಾ ಸರ್ಕಾರಿ ಎಲ್ಲಾ ಶಾಲೆಗಳಿಗೆ ಅನ್ವಯಿಸುತ್ತದೆ ಎಂದು ಹೇಳಲಾಗಿದೆ.
ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ:
ಬೋರ್ಡ್ ಪರೀಕ್ಷೆಯ ಮಾದರಿಯಲ್ಲಿ, 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಭಾಗೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ. 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳು (Board Exam) ಅನುತ್ತೀರ್ಣರಾದ ವಿಷಯಗಳಿಗೆ ಮರು ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ವಿಭಾಗೀಯ ಪರೀಕ್ಷೆಯನ್ನು ಎರಡು ತಿಂಗಳೊಳಗೆ ನಡೆಸಲಾಗುವುದು. ವಿದ್ಯಾರ್ಥಿಗಳು ವಿಭಾಗೀಯ ಪರೀಕ್ಷೆಯಲ್ಲೂ ಅನುತ್ತೀರ್ಣರಾದರೆ, ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ.
ಇದನ್ನೂ ಓದಿ- WHO: ಆರೋಗ್ಯವಂತ ಮಕ್ಕಳಿಗೆ ಕರೋನಾ ಬೂಸ್ಟರ್ ಡೋಸ್ ಬೇಕೇ? WHO ಮುಖ್ಯ ವಿಜ್ಞಾನಿ ಹೇಳಿದ್ದೇನು?
ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ:
ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು (Education System) ಸುಧಾರಿಸುವ ನಿಟ್ಟಿನಲ್ಲಿ ಹರಿಯಾಣದ ಶಿಕ್ಷಣ ಇಲಾಖೆ ಹೊಸ ಆದೇಶವವನ್ನು ಜಾರಿಗೊಳಿಸಿದೆ ಎಂದು ಹೇಳಲಾಗುತ್ತಿದೆ. 19 ಜನವರಿ 2022 ರಂದು ಈ ಕುರಿತಂತೆ ಮಾಹಿತಿ ನೀಡಿದ ರಾಜ್ಯ ಶಿಕ್ಷಣ ಸಚಿವ ಚೌಧರಿ ಕನ್ವರ್ ಪಾಲ್ ಅವರು 5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರವು ಐತಿಹಾಸಿಕ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಹೇಳಿದರು.
ಇದನ್ನೂ ಓದಿ - Corona Vaccine: ಸರ್ಕಾರದ ಮಹತ್ವದ ನಿರ್ಧಾರ, ಈಗ ನಿಮ್ಮ ಹತ್ತಿರದ ಮೆಡಿಕಲ್ ಸ್ಟೋರ್‌ನಲ್ಲೂ ಲಭ್ಯವಾಗಲಿದೆ ಕರೋನಾ ಲಸಿಕೆ
ಹರಿಯಾಣ ಶಾಲಾ ಶಿಕ್ಷಣ ಮಂಡಳಿಗೆ ಸಂಯೋಜಿತವಾಗಿರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಹೊಸ ನಿಯಮಗಳು ಅನ್ವಯಿಸುತ್ತವೆ. ಹರಿಯಾಣಕ್ಕಿಂತ ಮೊದಲು ಪಂಜಾಬ್ ಮತ್ತು ರಾಜಸ್ಥಾನದಲ್ಲಿ 5 ಮತ್ತು 8 ನೇ ತರಗತಿಗಳನ್ನು ಮಂಡಳಿಗಳಾಗಿ ಘೋಷಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.