ವೈದ್ಯರಿಂದ ಮೃತ ಎಂದು ಘೋಷಣೆ ಬಳಿಕ 2 ಗಂಟೆಗಳವರೆಗೆ ಡೀಪ್ ಫ್ರೀಜರ್ ನಲ್ಲಿತ್ತು ದೇಹ !ಚಿತೆ ಏರುತ್ತಿದ್ದಂತೆಯೇ ಎದ್ದು ಕುಳಿತ ವ್ಯಕ್ತಿ !
ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಪ್ರಧಾನ ವೈದ್ಯಕೀಯ ಅಧಿಕಾರಿ (PMO) ಸೇರಿದಂತೆ ಮೂವರು ವೈದ್ಯರನ್ನು ಅಮಾನತುಗೊಳಿಸಲಾಗಿದೆ.
ವ್ಯಕ್ತಿಯೊಬ್ಬರನ್ನು ವೈದ್ಯರು ಮೃತ ಎಂದು ಘೋಷಿಸಿದ ನಂತರ ವ್ಯಕ್ತಿ ಬದುಕಿ ಬಂದ ಘಟನೆ ನಡೆದಿದೆ. ಅಂತ್ಯಕ್ರಿಯೆ ನಡೆಸಲು ವ್ಯಕ್ತಿಯನ್ನು ಚಿತೆಗೆ ಏರಿಸುತ್ತಿದ್ದಂತೆಯೇ ವ್ಯಕ್ತಿ ಎದ್ದು ಕುಳಿತಿರುವ ಆಶ್ಚರ್ಯಕರ ಘಟನೆ ನಡೆದಿದೆ. ಈ ಘಟನೆ ಸವಾಲಾಗಿ ಪರಿಣಮಿಸಿದ್ದು, ಇಡೀ ಘಟನೆಯ ತನಿಖೆಗೆ ಜಿಲ್ಲಾಧಿಕಾರಿ ತಂಡ ರಚಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಪ್ರಧಾನ ವೈದ್ಯಕೀಯ ಅಧಿಕಾರಿ (PMO) ಸೇರಿದಂತೆ ಮೂವರು ವೈದ್ಯರನ್ನು ಅಮಾನತುಗೊಳಿಸಲಾಗಿದೆ.
ಚಿತಾಗಾರದಲ್ಲಿ ಜೀವಂತವಾದ ವ್ಯಕ್ತಿ :
ಗುರುವಾರ ಮಧ್ಯಾಹ್ನ, 47 ವರ್ಷದ ರೋಹಿತಾಶ್ವ ಎನ್ನುವ ವ್ಯಕ್ತಿಯ ಆರೋಗ್ಯ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡಿಕೆ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ರೋಹಿತಾಶ್ವ ಅವರನ್ನು ಆಸ್ಪತ್ರೆಯ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಇದಾದ ಬಳಿಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರದಲ್ಲಿಯೂ ಇರಿಸಲಾಗಿತ್ತು.
ಇದನ್ನೂ ಓದಿ : ಮುಂದಿನ ಏಳು ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆ
ಅಂತ್ಯಕ್ರಿಯೆಯ ಸಮಯದಲ್ಲಿ ಉಸಿರಾಟ ಆರಂಭ :
ನಂತರ ಸಂಜೆಯ ವೇಳೆಗೆ ರೋಹಿತಾಶ್ವನ ಅಂತ್ಯಸಂಸ್ಕಾರ ಮಾಡುವಾಗ, ಇದ್ದಕ್ಕಿದ್ದಂತೆ ರೋಹಿತಾಶ್ವ ಉಸಿರಾಡಲು ಪ್ರಾರಂಭಿಸಿದ್ದಾರೆ. ಇದನ್ನು ಕಂಡು ಸ್ಥಳದಲ್ಲಿ ಗೊಂದಲ ಉಂಟಾಗಿದ್ದು, ಕೂಡಲೇ ಅವರನ್ನು ಮರಳಿ ಬಿಡಿಕೆ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಆರಂಭಿಸಲಾಗಿದೆ. ಈ ಘಟನೆಯ ನಂತರ ಬಿಡಿಕೆ ಆಸ್ಪತ್ರೆಯಲ್ಲಿ ಕೋಲಾಹಲ ಉಂಟಾಗಿದ್ದು, ವೈದ್ಯರ ವಿರುದ್ಧ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಆಸ್ಪತ್ರೆ ಆಡಳಿತ ಮೌನ ವಹಿಸಿದ್ದು, ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಜಿಲ್ಲಾಧಿಕಾರಿ ರಾಮಾವತಾರ್ ಮೀನಾ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ಘಟನೆಯ ಕುರಿತು ತನಿಖಾ ತಂಡ ರಚಿಸಿ ವಿಸ್ತೃತ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ನಿರ್ಲಕ್ಷ್ಯ ತೋರಿರುವ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ