ಥಾಣೆ: ವೈದ್ಯಕೀಯ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಳ್ಳದೆ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ವೈದ್ಯನಿಂದ ರೋಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ಪೊಲೀಸರು ಅವರನ್ನು ಮಂಗಳವಾರ ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಹೊಟ್ಟೆ ನೋವಿನಿಂದ ಬಳಲುತ್ತಿದ್ದ 17 ವರ್ಷದ ಬಾಲಕಿಗೆ ಈತ 2017ರ ಆಗಸ್ಟ್‌ನಲ್ಲಿ  ಕೊಟ್ಟಿದ್ದ ಚಿಕಿತ್ಸೆಯಿಂದ ಆಕೆ ಮೃತಪಟ್ಟಿದ್ದಳು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ ಪಟ್ಟಣದಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಪ್ರವೇಶ್ ಶರ್ಮಾ(49) ಎಂಬ ಬೋಗಸ್ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಎಸ್‌ಐ ಯೋಗೇಶ್‌ ಗಾಯ್ಕರ್‌ ತಿಳಿಸಿದ್ದಾರೆ. 


ಪ್ರಕರಣದ ಬಗ್ಗೆ ನಡೆಸಿದ ತನಿಖೆ ಸಂದರ್ಭದಲ್ಲಿ ಪ್ರವೇಶ್ ಶರ್ಮಾ ವೈದ್ಯಕೀಯ ಮಂಡಳಿಯಲ್ಲಿ ವೈದ್ಯಕೀಯ ವೃತ್ತಿ ನಡೆಸಲು ಅನುಮತಿ ಪಡೆದಿಲ್ಲ ಎಂಬುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.