ನವದೆಹಲಿ: ಹರಿಯಾಣದ ಬಲ್ಲಭ ಗಡ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಶುಕ್ರವಾರ (ಫೆಬ್ರವರಿ 28) ಬಾಯ್ಲರ್ ಸ್ಫೋಟದಿಂದಾಗಿ ಕನಿಷ್ಠ ನಾಲ್ಕು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 27 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಬಾಯ್ಲರ್ ಬೆಂಕಿಯ ದೊಡ್ಡ ಪ್ರಮಾಣದಲ್ಲಿ ವ್ಯಾಪಿಸಿದೆ ಅನೇಕ ಜನರು ಇನ್ನೂ ಸಿಕ್ಕಿಬಿದ್ದಿದ್ದಾರೆ ಮತ್ತು ರಕ್ಷಣಾ ಕಾರ್ಯಾಚರಣೆ ಷ್ಟಕರವಾಗಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈಗ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂಧಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ ಎಂದು ಮೂಲಗಳು ತಿಳಿಸಿವೆ.


ಸ್ಫೋಟದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಶೂ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಬೆಂಕಿಯು ಹತ್ತಿರದ ಇತರ ಮೂರು ಕಟ್ಟಡಗಳಿಗೆ ಹರಡಿದೆ ಎನ್ನಲಾಗಿದೆ.


ಇದುವರೆಗೂ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ಪೊಲೀಸ್ ಅಧಿಕಾರಿಗಳು, ಸ್ಥಳೀಯ ಆಡಳಿತ, ಅಗ್ನಿಶಾಮಕ ದಳದ ಹಲವಾರು ತಂಡಗಳು ಸ್ಥಳದಲ್ಲೇ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.