ಮಾಸ್ಕೋ -ದೆಹಲಿ ವಿಮಾನದಲ್ಲಿ ಬಾಂಬ್ ಬೆದರಿಕೆ .! ಎಲ್ಲಾ ಯಾತ್ರಿಗಳೂ ಸುರಕ್ಷಿತ
Moscow-Delhi flight Bomb Threat: ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು.
Moscow-Delhi flight Bomb Threat: ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. ಇದಾದ ಬಳಿಕ ವಿಮಾನ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ 3.20 ಕ್ಕೆ ಲ್ಯಾಂಡ್ ಆಗಿದ್ದು, ತನಿಖೆ ನಡೆಸಲಾಗುತ್ತಿದೆ.
ಎಲ್ಲಾ ಪ್ರಯಾಣಿಕರು ದ ಸುರಕ್ಷಿತ :
ನಿನ್ನೆ ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ದೊರೆತಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ವಿಮಾನ 3.20ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಭೂ ಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದು, ವಿಮಾನವನ್ನು ಪರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ : “ನಾನು ಇಂಡಿಯಾದ ಮುಸ್ಲಿಂ ಹೊರತು ಚೀನಾದ ಮುಸ್ಲಿಂ ಅಲ್ಲ”
ಇದುವರೆಗೆ ವಿಮಾನದಲ್ಲಿ ಏನೂ ಪತ್ತೆಯಾಗಿಲ್ಲ :
ದೆಹಲಿ ವಿಮಾನ ನಿಲ್ದಾಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಇಲ್ಲಿಯವರೆಗೆ ಏನೂ ಪತ್ತೆಯಾಗಿಲ್ಲ. ವಿಮಾನ ಲ್ಯಾಂಡ್ ಆದ ಬಳಿಕ ಸುರಕ್ಷತೆಯ ದೃಷ್ಟಿಯಿಂದ ಸುತ್ತಮುತ್ತಲಿನ ಪ್ರದೇಶಗಳನ್ನು ಖಾಲಿ ಮಾಡಲಾಗಿತ್ತು. ವಿಮಾನ ಭೂಸ್ಪರ್ಶ ಮಾಡಿದ ಬಳಿಕ ವಿಮಾನವನ್ನು ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : Weird News : ವಿಚಿತ್ರವಾದ್ರೂ ನಿಜ! ಈ ಹಳ್ಳಿಯಲ್ಲಿದೆ ಬಾವಲಿಗಳನ್ನು ಪೂಜಿಸುವ ಪದ್ಧತಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.