Breaking News: ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ CM, ಅಜಿತ್ ಪವಾರ್ DCM ಆಗಿ ಪ್ರಮಾಣವಚನ

ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್‌ಗೆ ಮಾಸ್ಟರ್ ಸ್ಟ್ರೋಕ್ ನೀಡಿ ರಾಜ್ಯದಲ್ಲಿ ಬಿಜೆಪಿ-ಎನ್‌ಸಿಪಿ ಮೈತ್ರಿ ಸರ್ಕಾರ ರಚಿಸಿದೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರೆ, ಎನ್‌ಸಿಪಿಯಾ ಅಜಿತ್ ಪವಾರ್ ಉಪಮುಖ್ಯಮಂತ್ರಿ ಪದಗ್ರಹಣ ಮಾಡಿದರು.

Last Updated : Nov 23, 2019, 09:11 AM IST
Breaking News: ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ CM, ಅಜಿತ್ ಪವಾರ್ DCM ಆಗಿ ಪ್ರಮಾಣವಚನ title=
Photo courtesy: ANI

ಮುಂಬೈ: ಮಹಾರಾಷ್ಟ್ರ(Maharashtra) ಸರ್ಕಾರ ರಚನೆ ಕುರಿತ ಇಷ್ಟು ದಿನಗಳ ಕುತೂಹಲಕ್ಕೆ ತೆರೆಬಿದ್ದಿದ್ದು, ಬೆಳ್ಳಂಬೆಳಗ್ಗೆ ನಡೆದ ನಾಟಕೀಯ ಬೆಳವಣಿಗೆಯಲ್ಲಿ ದೇವೇಂದ್ರ ಫಡ್ನವೀಸ್(Devendra Fadnavis) ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ ಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ದೇವೇಂದ್ರ ಫಡ್ನವೀಸ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

 ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ NCP ಪಕ್ಷದ ಅಜಿತ್ ಪವಾರ್(Ajit pawar) ಪ್ರಮಾಣವಚನ ಸ್ವೀಕರಿಸಿದರು.

ಮಹಾರಾಷ್ಟ್ರದಲ್ಲಿ ಶನಿವಾರ ಬೆಳಿಗ್ಗೆ ನಡೆದ ರಾಜಕೀಯ ಬೆಳವಣಿಗೆಯಿಂದಾಗಿ ಶಿವಸೇನೆ(Shiv Sena)-ಎನ್‌ಸಿಪಿ ಮತ್ತು ಕಾಂಗ್ರೆಸ್ (Congress) ಒಟ್ಟಾಗಿ ಸರ್ಕಾರ ರಚಿಸುವ ಎಲ್ಲ ಪ್ರಯತ್ನಗಳು ವಿಫಲಗೊಂಡಿದ್ದು, ಎನ್‌ಸಿಪಿ(NCP)ಯ ಬೆಂಬಲದೊಂದಿಗೆ ಬಿಜೆಪಿ(BJP) ತನ್ನ ಸರ್ಕಾರವನ್ನು ರಚಿಸಿತು. 

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ದೇವೇಂದ್ರ ಫಡ್ನವೀಸ್ ಮಾತನಾಡಿ, ಮಹಾರಾಷ್ಟ್ರದ ಜನರು ಸ್ಪಷ್ಟ ಆದೇಶ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಾಶ್ವತ ಸರ್ಕಾರದ ಅವಶ್ಯಕತೆಯಿದೆ. ಇದಕ್ಕಾಗಿ ನಾವು ಎನ್‌ಸಿಪಿಯೊಂದಿಗೆ ಸರ್ಕಾರ ರಚಿಸಿದ್ದೇವೆ ಎಂದು ಹೇಳಿದರು. ಇದೇ ವೇಳೆ ಶಿವಸೇನೆ ಜನರ ಆದೇಶವನ್ನು ತಿರಸ್ಕರಿಸಿದೆ ಎಂದು ಫಡ್ನವೀಸ್ ಶಿವಸೇನೆ ವಿರುದ್ಧ ಹರಿಹಾಯ್ದರು.

ಜನರ ತೀರ್ಪಿಗೆ ದ್ರೋಹ ಎಂದು ಉದ್ಧವ್ ಠಾಕ್ರೆ ವಿರುದ್ಧ ದೂರು

ಅದೇ ಸಮಯದಲ್ಲಿ, ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಎನ್‌ಸಿಪಿಯ ಅಜಿತ್ ಪವಾರ್, ಚುನಾವಣಾ ಫಲಿತಾಂಶದ ದಿನದಿಂದ ಇಲ್ಲಿಯವರೆಗೆ ಯಾವುದೇ ಪಕ್ಷವು ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ರೈತ ಸಮಸ್ಯೆಗಳು ಸೇರಿದಂತೆ ಮಹಾರಾಷ್ಟ್ರವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ, ಆದ್ದರಿಂದ ನಾವು ಸ್ಥಿರವಾದ ಸರ್ಕಾರವನ್ನು ರಚಿಸಲು ಈ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ-NCP ಸರ್ಕಾರ ರಚನೆಯಾಗುತ್ತಿದ್ದಂತೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi),  ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಅಭಿನಂದಿಸಿದ್ದಾರೆ. ಮಹಾರಾಷ್ಟ್ರದ ಸಿಎಂ ಮತ್ತು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಜಿ ಮತ್ತು ಅಜಿತ್ ಪವಾರ್ ಜಿ ಅವರಿಗೆ ಅಭಿನಂದನೆಗಳು ಎಂದು ಅವರು ಬರೆದಿದ್ದಾರೆ. ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಅವರು ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
 

ಶಿವಸೇನೆ-NCP-ಕಾಂಗ್ರೆಸ್ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ನೀಡಲು ಸಾಧ್ಯವಿಲ್ಲ: ನಿತಿನ್ ಗಡ್ಕರಿ

Trending News