Arunachal Pradesh: ಗಡಿರೇಖೆಯಲ್ಲಿ ಸಂಘರ್ಷ; ಭಾರತ-ಚೀನಾ ಸೈನಿಕರಿಗೆ ಗಾಯ!
ಘಟನೆ ಹಿನ್ನೆಲೆ ತವಾಂಗ್ನ ಭಾರತದ ಸೇನಾ ಕಮಾಂಡರ್ ಚೀನಾದ ಸೇನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಂಘರ್ಷ ನಡೆದ ಪ್ರದೇಶದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಚನಾತ್ಮಕ ಕಾರ್ಯವಿಧಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆಂದು ಹೇಳಲಾಗಿದೆ.
ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ವಾಸ್ತವ ಗಡಿ ರೇಖೆ(LAC)ಯ ಬಳಿ ಚೀನಾ ಸೈನಿಕರು ಮತ್ತು ಭಾರತೀಯ ಯೋಧರ ನಡುವೆ ಕಾದಾಟ ನಡೆದಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
ಡಿಸೆಂಬರ್ 9ರಂದೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ ತವಾಂಗ್ ಸೆಕ್ಟರ್ ಬಳಿಯ ಯಾಂಗ್‌ಸ್ಟೆ ಪ್ರದೇಶದಲ್ಲಿ ಚೀನಾದ ಸೈನಿಕರು ಭಾರತೀಯ ಸೈನಿಕರೊಂದಿಗೆ ಕಾದಾಟ ನಡೆಸಿದ್ದಾರೆ. ಪರಿಣಾಮ ಎರಡೂ ಕಡೆಯ ಸೈನಿಕರಿಗೆ ಸಣ್ಣಪುಟ್ಟ ಗಾಯಗಳಿಗೆ ಎಂದು ವರದಿಯಾಗಿದೆ.
ಇದನ್ನೂ ಓದಿ: Gujarat: ಗುಜರಾತ್‌ನಲ್ಲಿ ನೂತನ ಸರ್ಕಾರ ರಚನೆ, ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ
ಚೀನೀ ಸೈನಿಕರನ್ನು ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆ(LAC)ಯ ಸಮೀಪ ತಡೆಹಿಡಿಯಲಾಗಿತ್ತು.
ಇದನ್ನೂ ಓದಿ: RS 2000 Note: ‘3 ವರ್ಷಗಳ ಹಿಂದೆಯೇ 2 ಸಾವಿರ ರೂ. ನೋಟುಗಳ ಪ್ರಿಂಟಿಂಗ್ ಸ್ಥಗಿತ’!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.