ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370 ನೇ ವಿಧಿ ಮರಳಿ ತರುವ ಧೈರ್ಯ ತೋರಲಿ-ಅಮಿತ್ ಶಾ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಎಂದಾದರೂ ಅಧಿಕಾರಕ್ಕೆ ಮರಳಿದರೆ 370 ನೇ ವಿಧಿಯನ್ನು ಮರಳಿ ತರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲು ಹಾಕಿದ್ದಾರೆ.

Last Updated : Oct 19, 2019, 03:52 PM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370 ನೇ ವಿಧಿ ಮರಳಿ ತರುವ ಧೈರ್ಯ ತೋರಲಿ-ಅಮಿತ್ ಶಾ title=

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಎಂದಾದರೂ ಅಧಿಕಾರಕ್ಕೆ ಮರಳಿದರೆ 370 ನೇ ವಿಧಿಯನ್ನು ಮರಳಿ ತರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲು ಹಾಕಿದ್ದಾರೆ.

ರಾಜುರಾ ಸ್ಥಾನದಲ್ಲಿ ನಡೆದ ಮತದಾನ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, ಮತ-ಬ್ಯಾಂಕ್ ರಾಜಕೀಯದಿಂದಾಗಿ ಕಾಂಗ್ರೆಸ್, ಎನ್‌ಸಿಪಿ ಮತ್ತು ಇತರ ವಿರೋಧ ಪಕ್ಷಗಳು 370 ನೇ ವಿಧಿಯ ನಿಬಂಧನೆಗಳನ್ನು ಕೊನೆಗೊಳಿಸಿಲ್ಲ. ಕಳೆದ 70 ವರ್ಷಗಳಲ್ಲಿ  370 ನೇ ವಿಧಿ ಭಯೋತ್ಪಾದಕರ ಹೆಬ್ಬಾಗಿಲಾಗಿ ಮಾರ್ಪಟ್ಟಿದೆ, ಇದು ಜಮ್ಮು ಮತ್ತು ಕಾಶ್ಮೀರದಲ್ಲಿ 40,000 ಹತ್ಯೆಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

ಮೋದಿ ನಾಯಕತ್ವದಡಿಯಲ್ಲಿ ಕೇಂದ್ರವು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಸಂಪೂರ್ಣ ನಂಬಿಕೆ ಇರುವುದರಿಂದ ನರೇಂದ್ರ ಮೋದಿ ಸರ್ಕಾರವನ್ನು 2019 ರಲ್ಲಿ ದೊಡ್ಡ ಜನಾದೇಶದೊಂದಿಗೆ ಆಯ್ಕೆ ಮಾಡಲಾಯಿತು ಎಂದು ಅವರು ಹೇಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿ ಅಧಿಕಾರಕ್ಕೆ ಬಂದ ನಂತರ ಪುನಃಸ್ಥಾಪಿಸಲು ರಾಹುಲ್ ಗಾಂಧಿ ಮತ್ತು ಶರದ್ ಪವಾರ್ ಅವರಿಗೆ ನಾನು ನೇರ ಸವಾಲು ಹಾಕುತ್ತಿದ್ದೇನೆ ಎಂದು ಅವರು ಹೇಳಿದರು.

"70 ವರ್ಷಗಳ ಕಾಲ ದೇಶವನ್ನು ಆಳುತ್ತಿದ್ದರೂ ಕಾಂಗ್ರೆಸ್ ಆದಿವಾಸಿಗಳು ಮತ್ತು ಇತರ ಹಿಂದುಳಿದ ವರ್ಗದವರಿಗೆ ಏನೂ ಮಾಡಿಲ್ಲ, ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು. 
 

Trending News