BSF Soldier: ಸಹೋದ್ಯೋಗಿಗಳ ಮೇಲೆ ಭೀಕರ ಗುಂಡಿನ ದಾಳಿ! 5 ಬಿಎಸ್‌ಎಫ್ ಯೋಧರ ದುರ್ಮರಣ
BSF Soldier: ಓರ್ವ ಬಿಎಸ್‌ಎಫ್ ಜವಾನ ತನ್ನ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಐವರು ಹತರಾಗಿದ್ದಾರೆ ಎಂದು ವರದಿಯಾಗಿದೆ.
ನವದೆಹಲಿ: ಪಂಜಾಬ್‌ನ ಅಮೃತಸರದ ಖಾಸಾ ಬಿಎಸ್‌ಎಫ್ ಪ್ರದೇಶದಲ್ಲಿ ಭಾನುವಾರ (ಮಾರ್ಚ್ 6) ನಡೆದ ಘಟನೆಯಲ್ಲಿ ಐವರು ಗಡಿ ಭದ್ರತಾ ಪಡೆ (BSF) ಸಿಬ್ಬಂದಿಯನ್ನು ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ: ಹತ್ಯೆಯಾದ ಹರ್ಷ ಮನೆಗೆ ಬಿಎಸ್ವೈ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ
ಬಿಎಸ್‌ಎಫ್ ಜವಾನ ಸತ್ತೆಪ್ಪ (Ct Satteppa S K) ಎಂಬುವವವರು ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಐವರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಗುಂಡಿನ ದಾಳಿ ನಡೆಸಿದ ಸತ್ತೆಪ್ಪ ಕೂಡ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬಿಎಸ್‌ಎಫ್ ಮಾಹಿತಿ ನೀಡಿದೆ.
6 ಯೋಧರ ಮೇಲೆ ಗುಂಡಿನ ದಾಳಿ:
ಅಮೃತಸರದ (Amritsar) ಬಿಎಸ್‌ಎಫ್ ಶಿಬಿರದಲ್ಲಿ ಸಿಬ್ಬಂದಿ ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಗುಂಡಿನ ದಾಳಿಯಿಂದ ಗಾಯಗೊಂಡ ಯೋಧರನ್ನು ಗುರುನಾನಕ್ ದೇವ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಘಟನೆಯಲ್ಲಿ 6 ಯೋಧರು ಗುಂಡು ಹಾರಿಸಿದ್ದು, ಈ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ.
ಬಿಎಸ್‌ಎಫ್ ಜವಾನ ಗುಂಡಿನ ದಾಳಿ ನಡೆಸಿದ್ದು ಏಕೆ?
ಬಿಎಸ್‌ಎಫ್ ಯೋಧರ ಗುಂಡಿನ ದಾಳಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಸಮೀಪವಿರುವ ಅಟ್ಟಾರಿ-ವಾಘಾ ಗಡಿಯ (Attari-Wagah border) ಸುಮಾರು 20 ಕಿಮೀ ದೂರದಲ್ಲಿರುವ ಖಾಸಾ ಪ್ರದೇಶದ ಬಿಎಸ್‌ಎಫ್ ಶಿಬಿರದ ಕೆಫೆಟೇರಿಯಾದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಮೇಕೆದಾಟು ವಿಚಾರವನ್ನಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಿಂದ ಚುನಾವಣಾ ಆಟ: ಎಚ್ಡಿಕೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.