ನವದೆಹಲಿ: ಘಟಬಂಧನ್ ಕುರಿತು ನಡೆಯುತ್ತಿರುವ ಚರ್ಚೆ ಬಗ್ಗೆ ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ) ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಬಿಎಸ್​ಪಿ ಯಾವುದೇ ರಾಜ್ಯದಲ್ಲೂ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ(ಮಾರ್ಚ್ 12)
ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳು ಬಿಜೆಪಿಯನ್ನು ಸೋಲಿಸುವ ಸಾಮರ್ಥ್ಯವನ್ನು ಹೊಂದಿವೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಬಿಎಸ್​ಪಿಯ ಯಾವುದೇ ರೀತಿಯ ಒಪ್ಪಂದವಿಲ್ಲ ಎಂದು ಅವರು ತಿಳಿಸಿದರು.


ಈ ಕುರಿತು ಬಿಎಸ್​ಪಿಯಿಂದ ಪತ್ರಿಕಾ ಪ್ರಕಟಣೆಯೊಂದು ಬಿಡುಗಡೆಯಾಗಿದ್ದು, ಇದರ ಪ್ರಕಾರ ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ)ವು ಇತರ ರಾಜ್ಯಗಳಲ್ಲಿ ಸಣ್ಣ ಪಕ್ಷಗಳ ಜೊತೆ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.


ಕೆಲವು ಪಕ್ಷಗಳು ಬಿಎಸ್​ಪಿ ಜೊತೆ ಮೈತ್ರಿಗೆ ಉತ್ಸುಕರಾಗಿದ್ದಾರೆ ಎಂದು ತಿಳಿಸಿರುವ ಮಾಯಾವತಿ, ಕೇವಲ ಚುನಾವಣಾ ಲಾಭಕ್ಕಾಗಿ ಇದನ್ನು ಮಾಡಲಾರರು ಎಂದಿದ್ದಾರೆ. ಪರಿಸ್ಥಿತಿ ಬದಲಾಗಲು ದೀರ್ಘ ಸಮಯ ತೆಗೆದುಕೊಳ್ಳುವುದಿಲ್ಲ ಎಂದಿರುವ ಅವರು, ಬಿಎಸ್​ಪಿ ತನ್ನ ಕಾರ್ಯಕರ್ತರನ್ನು ಬಲಪಡಿಸುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದಿದ್ದಾರೆ.