ಲಕ್ನೋ: ಸುಪ್ರೀಂ ಕೋರ್ಟ್ ತೀರ್ಪನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸರ್ಕಾರವು ದೀಪಾವಳಿಯ ಸಂದರ್ಭದಲ್ಲಿ ರಾತ್ರಿ 8 ರಿಂದ ರಾತ್ರಿ 10 ರವರೆಗೆ ಮಾತ್ರ ಕಡಿಮೆ ಮಾಲಿನ್ಯ ಉಂಟುಮಾಡುವ ಹಸಿರು ಪಟಾಕಿಗಳನ್ನು ಸಿಡಿಸಲು ಅನುಮತಿ ನೀಡಿದೆ.


COMMERCIAL BREAK
SCROLL TO CONTINUE READING

ಇ-ಕಾಮರ್ಸ್ ವೆಬ್‌ಸೈಟ್‌ಗಳಿಂದ ಪಟಾಕಿಗಳನ್ನು ಖರೀದಿಸಬಾರದು ಮತ್ತು ಪಟಾಕಿಗಳನ್ನು ಪರವಾನಗಿ ಪಡೆದ ಮಾರಾಟಗಾರರಿಂದ ಮಾತ್ರ ಖರೀದಿಸಬೇಕೆಂದು ಸರ್ಕಾರ ಜನರನ್ನು ಒತ್ತಾಯಿಸಿದೆ. ಪಟಾಕಿಗಳನ್ನು ಸಿದಿಸುವಾಗ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರನ್ನು ಸಂವೇದನಾಶೀಲಗೊಳಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಅಧಿಸೂಚನೆ ತಿಳಿಸಿದೆ.


ಅಧಿಕಾರಿಗಳು ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಸ್ಟೇಷನ್ ಹೌಸ್ ಅಧಿಕಾರಿಗಳ (ಎಸ್‌ಎಚ್‌ಒ) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.


ಕಳೆದ ವರ್ಷ ಅಕ್ಟೋಬರ್ 23 ರಂದು, ಕೆಲವು ಷರತ್ತುಗಳೊಂದಿಗೆ ಪಟಾಕಿ ಬಳಕೆಗೆ ನಿಷೇಧ ಹೇರಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು, ಇದರಲ್ಲಿ ಕಡಿಮೆ ಮಾಲಿನ್ಯ ಉಂಟುಮಾಡುವ ಹಸಿರು ಕ್ರ್ಯಾಕರ್‌ಗಳನ್ನು ಮಾತ್ರ ಬಳಸಬೇಕು ಎಂದು ಹೇಳಲಾಗಿತ್ತು.


ದೀಪಾವಳಿಯಂದು ರಾತ್ರಿ 8 ರಿಂದ ರಾತ್ರಿ 10 ರವರೆಗೆ ಮಾತ್ರ ಜನರು ಪಟಾಕಿ ಸಿಡಿಸಲು ಅವಕಾಶ ನೀಡಲಾಗುವುದು ಎಂದು ನ್ಯಾಯಾಲಯ ತೀರ್ಪು ನೀಡಿತ್ತು.


ಈ ವರ್ಷ ಅಕ್ಟೋಬರ್ 27 ರಂದು 'ದೀಪಾವಳಿ' ಹಬ್ಬವನ್ನು ಆಚರಿಸಲಾಗುವುದು. ದೀಪಾವಳಿ ದಿನದಂದು ಜನರು ತಮ್ಮ ಮನೆಗಳನ್ನು ಸಾಂಪ್ರದಾಯಿಕ ದೀಪಗಳಿಂದ ಅಲಂಕರಿಸುತ್ತಾರೆ ಮತ್ತು ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಜೊತೆಗೆ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸುತ್ತಾರೆ.


ಆದರೆ ಪಟಾಕಿಯಿಂದ ಶಬ್ಧಮಾಲಿನ್ಯದ ಜೊತೆಗೆ ವಾಯುಮಾಲಿನ್ಯ ಕೂಡ ಹೆಚ್ಚಾಗುತ್ತದೆ. ಆದ್ದರಿಂದ ಕಡಿಮೆ ಮಾಲಿನ್ಯ ಉಂಟುಮಾಡುವ ಹಸಿರು ಪಟಾಕಿಗಳನ್ನು ಸಿಡಿಸಲು ಜನರಲ್ಲಿ ಮನವಿ ಮಾಡಲಾಗಿದೆ.