Jammu Bus Accident : ಕಂದಕಕ್ಕೆ ಉರುಳಿದ ಬಸ್ : ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದ 10 ಜನರ ಸಾವು
Jammu Bus Accident News : ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್‌ಡಿಆರ್‌ಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯ ಪ್ರಾರಂಭಿಸಿದ್ದಾರೆ.
Jammu Bus Accident : ಜಮ್ಮುವಿನಲ್ಲಿ ಮಂಗಳವಾರ ಭಾರೀ ಅಪಘಾತ ಸಂಭವಿಸಿದೆ. ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಝಜ್ಜರ್ ಕೋಟ್ಲಿಯಲ್ಲಿ ಆಳವಾದ ಕಂದಕಕ್ಕೆ ಉರುಳಿದೆ. ಪರಿಣಾಮವಾಗಿ ಬಸ್ ನಲ್ಲಿದ್ದ ಬಿದ್ದು 10 ಜನರು ಮೃತಪಟ್ಟಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್‌ಡಿಆರ್‌ಎಫ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಮೃತರು ಬಿಹಾರದ ಲಖಿ ಸರಾಯ್ ಮತ್ತು ಬೇಗುಸರಾಯ್ ಜಿಲ್ಲೆಯ ನಿವಾಸಿಗಳು ಎನ್ನಲಾಗಿದೆ.
ಬೆಳಿಗ್ಗೆ ಅಪಘಾತದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದ್ದು, ಕೂಡಲೇ ನಮ್ಮ ತಂಡ ಇಲ್ಲಿಗೆ ತಲುಪಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ ಎಂದು ಸಿಆರ್‌ಪಿಎಫ್ ಅಧಿಕಾರಿ ಅಶೋಕ್ ಚೌಧರಿ ತಿಳಿಸಿದ್ದಾರೆ. ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ತಂಡವೂ ಕೂಡಾ ಸಿಆರ್‌ಪಿಎಫ್ ಜೊತೆ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಕತ್ರಾಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಬಿಹಾರ ಮೂಲದವರಿದ್ದರು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಕೀ ನ್ಯಾವಿಗೇಷನ್ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ
ಬಸ್ಸಿನಲ್ಲಿದ್ದ ಯಾತ್ರಾರ್ಥಿಗಳು ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುತ್ತಿದ್ದರು. ಕತ್ರಾವು ತ್ರಿಕೂಟ ಬೆಟ್ಟಗಳ ಮೇಲಿರುವ ಪ್ರಸಿದ್ಧ ತೀರ್ಥಯಾತ್ರೆಯ ಮೂಲ ಶಿಬಿರವಾಗಿದೆ. ಸದ್ಯದ ಮಾಹಿತಿಯ ಪ್ರಕಾರ 20 ಮಂದಿ ಗಾಯಗೊಂಡಿದ್ದಾರೆ ಎಂದು ಜಮ್ಮುವಿನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ಪೊಲೀಸರಿಗೆ ಸಹಾಯ ಮಾಡುತ್ತಿದ್ದಾರೆ.
ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 21 ರಂದು, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಮಾತಾ ವೈಷ್ಣೋ ದೇವಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 27 ವರ್ಷದ ಮಹಿಳೆ ಸಾವನ್ನಪ್ಪಿದ್ದು, 24 ಜನರು ಗಾಯಗೊಂಡಿದ್ದರು.
ಮತ್ತೊಂದು ಅಪಘಾತದಲ್ಲಿ 4 ಜನರು ಸಾವು :
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲೂ ಅಪಘಾತ ಸಂಭವಿಸಿದೆ. ಖಾಸಗಿ ಕಾರೊಂದು ರಸ್ತೆಯಿಂದ ಸ್ಕಿಡ್ ಆಗಿ 300 ಅಡಿಗಳಷ್ಟು ಉರುಳಿ ಚೆನಾಬ್ ನದಿಯ ದಡದಲ್ಲಿ ಬಿದ್ದಿದೆ. ಪರಿಣಾಮವಾಗಿ ಅದರಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.
ರಗ್ಗಿ ನಾಲಾ ಬಳಿಯ ಬಟೋಟೆ-ಕಿಶ್ತ್ವಾರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಮತ್ತು ಸ್ಥಳೀಯ ಜನರ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ಹಲವು ಗಂಟೆಗಳ ಪರಿಶ್ರಮದ ನಂತರ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ), ಕಿಶ್ತ್ವಾರ್ ಅಬ್ದುಲ್ ಖಯೂಮ್, ಕಾರಿನಲ್ಲಿದ್ದವರು ಪುಲ್-ದೋಡಾದಿಂದ ಜಮ್ಮು ಕಡೆಗೆ ಪ್ರಯಾಣಿಸುತ್ತಿದ್ದಾಗ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿ 300 ಅಡಿಗಳಷ್ಟು ಕೆಳಗೆ ಉರುಳಿದೆ.
ಇದನ್ನೂ ಓದಿ : ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಎಫ್ಐಆರ್ ದಾಖಲು
ನಾಲ್ವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಗೊಂಡ ಒಬ್ಬನನ್ನು ದೋಡಾದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ . ಅತಿವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ