close

News WrapGet Handpicked Stories from our editors directly to your mailbox

ಪಟ್ನಾದಲ್ಲಿ ಭೀಕರ ಬಸ್ ಅಪಘಾತ: 4 ಮಂದಿ ಮೃತ, ಹಲವರಿಗೆ ಗಾಯ

ಪಟ್ನಾದಲ್ಲಿ ಭೀಕರ ಬಸ್ ಅಪಘಾತವೊಂದು ಸಂಭವಿಸಿದ್ದು, ಅಪಘಾತದಲ್ಲಿ ಕೆಲವರು ಮೃತಪಟ್ಟಿದ್ದು, ಹೆಚ್ಚಿನ ಜನರಿಗೆ ಗಾಯಗಳಾಗಿದೆ.   

Updated: Oct 26, 2018 , 03:06 PM IST
ಪಟ್ನಾದಲ್ಲಿ ಭೀಕರ ಬಸ್ ಅಪಘಾತ: 4 ಮಂದಿ ಮೃತ, ಹಲವರಿಗೆ ಗಾಯ

ಪಟ್ನಾ: ಪಟ್ನಾದ ಅಗಮ್ಕುನಾದಲ್ಲಿ ಭೀಕರ ಬಸ್ ಅಪಘಾತವೊಂದು ಸಂಭವಿಸಿದ್ದು, ಅಪಘಾತದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, ಹೆಚ್ಚಿನ ಜನರಿಗೆ ಗಾಯಗಳಾಗಿದೆ. ಅಪಘಾತದ ಬಳಿಕ ಸ್ಥಳಕ್ಕೆ ಧಾವಿಸಿರುವ ಪೊಲೀಸರು ತ್ವರಿತವಾಗಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೊಳಗಾದ ಬಸ್ ಪಟ್ನಾದಿಂದ ರೋಸ್ಡಾಗೆ ತೆರಳುತ್ತಿತ್ತು ಎನ್ನಲಾಗಿದೆ.

ವಾಸ್ತವವಾಗಿ,  ಪಾಟ್ನಾದ ಅಗಮ್ಕುನಾ ನಿಲ್ದಾಣದ ಬಾಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೊಳಗಾಗಿದೆ.  ಈ ಅಪಘಾತದಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅದೇ ಸಮಯದಲ್ಲಿ, ಹನ್ನೆರಡುಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ನಂತರ, ಸ್ಥಳೀಯರು ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಆರಂಭಿಸಿದರು. ತಕ್ಷಣವೇ ಪೊಲೀಸರಿಗೆ ತಿಳಿಸಿದರು. ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ತಕ್ಷಣ ಘಟನಾ ಸ್ಥಳವನ್ನು ತಲುಪಿದರು.