ಉತ್ತರಪ್ರದೇಶದ ಉನ್ನಾವೊದಲ್ಲಿ ಭೀಕರ ರಸ್ತೆ ಅಪಘಾತಕ್ಕೆ 18 ಬಲಿ. ಮೂವರ ವಿರುದ್ಧ ಎಫ್‌ಐಆರ್ ದಾಖಲು
Road Accident: ಉತ್ತರ ಪ್ರದೇಶದ ಉನ್ನಾವೋದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ 18 ಜನರು ಜೀವ ಕಳೆದುಕೊಂಡಿದ್ದಾರೆ. ಅಲ್ಲದೆ, ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
Unnao Bus Accident: ಉತ್ತರ ಪ್ರದೇಶದ ಉನ್ನಾವೋದಲ್ಲಿ ಬುಧವಾರ (ಜುಲೈ 10) ಹಾಲಿನ ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 18 ಜನರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ಸಂಬಂಧ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಆಗ್ರಾ-ಲಖನೌ ಎಕ್ಸ್ಪ್ರೆಸ್ವೇನಲ್ಲಿ ಅಪಘಾತ:
ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ (Lucknow-Agra Expressway) ಬಿಹಾರದ ಶಿವಗಧದಿಂದ ದೆಹಲಿಗೆ ಹೋಗುತ್ತಿದ್ದ ಬಸ್(ಬಸ್‌ನ ಸಂಖ್ಯೆ ಯುಪಿ 95 ಟಿ 4729) ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಬಸ್ ಹಾಲಿನ ಕಂಟೈನರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ (Accident) ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಸಹ ಘೋಷಿಸಲಾಗಿದೆ.
ಇದನ್ನೂ ಓದಿ- ಕಥುವಾದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರ ದಾಳಿ, ಹೊಣೆಹೊತ್ತ ಕಾಶ್ಮೀರ್ ಟೈಗರ್ಸ್
ಬಸ್ ಮಾಲೀಕರ ಹೆಸರಿನಲ್ಲಿ ಒಟ್ಟು 39 ಬಸ್‌ಗಳು:
ಪೊಲೀಸರ ತನಿಕೆ ವೇಳೆ, ಉನ್ನಾವೊದಲ್ಲಿ ಅಪಘಾತಕ್ಕೀಡಾದ (Unnao Accident) ಬಸ್‌ನ ಮಾಲೀಕರ ಪುಷ್ಪೇಂದ್ರ ಎಂಬುವವರ ಹೆಸರಿನಲ್ಲಿ ಬರೋಬ್ಬರಿ 39 ಬಸ್‌ಗಳು ನೋಂದಣಿಯಾಗಿರುವುದು ಕಂಡುಬಂದಿದೆ. ವಿಪರ್ಯಾಸವೆಂದರೆ ಈ ಎಲ್ಲಾ ಬಸ್‌ಗಳು ವರ್ಷಗಳಿಂದ ಯಾವುದೇ ಪರವಾನಗಿ ಇಲ್ಲದೇ ಸಂಚರಿಸುತ್ತಿವೆ ಎಂಬುದು ಆಘಾತಕಾರಿಯಾಗಿದೆ.
ಇದನ್ನೂ ಓದಿ- Hathras tragedy: ಹೆಣಗಳ ರಾಶಿ ನೋಡಿ ಪೊಲೀಸ್ ಕಾನ್ಸ್‌ಟೇಬಲ್‌ಗೆ ಹೃದಯಾಘಾತ!
ಅಪಘಾತದ ಬಳಿಕ ಟ್ರಾವೆಲ್ ಏಜೆನ್ಸಿಯ ಮಾಲೀಕ-ಗುತ್ತಿಗೆದಾರರ ವಿರುದ್ಧವೂ ಪ್ರಕರಣವನ್ನು ದಾಖಲಿಸಲಾಗಿದೆ. ಇದಲ್ಲದೆ, ಉತ್ತರ ಪ್ರದೇಶದ ಮಹೋಬಾದಿಂದ ದೆಹಲಿ ಮತ್ತು ಬಿಹಾರದವರೆಗೆ ಬಸ್ ಮಾಫಿಯಾಗಳು ಸಿಂಡಿಕೇಟ್ ರಚಿಸಿಕೊಂಡು ಪರ್ಮಿಟ್ ಇಲ್ಲದೇ ರಸ್ತೆಗಳಲ್ಲಿ ಇಂತಹ ಬಸ್ಸುಗಳನ್ನು ಓಡಿಸುತ್ತಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.