Road Accident: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಜಲಂಧರ್-ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಸೋಮವಾರ (ಆಗಸ್ಟ್ 19)  ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಈ ದುರ್ಘಟನೆಯಲ್ಲಿ ಕನಿಷ್ಠ 16 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. 


COMMERCIAL BREAK
SCROLL TO CONTINUE READING

ದಸುಯಾದಿಂದ ಜಲಂಧರ್‌ಗೆ ತೆರಳುತ್ತಿದ್ದ ಖಾಸಗಿ ಬಸ್ (Private Bus) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದ ಸಮಯದಲ್ಲಿ ಬಸ್ ನಲ್ಲಿ ಸುಮಾರು 42 ಪ್ರಯಾಣಿಕರಿದ್ದರು. ಇವರಲ್ಲಿ 16 ಜನರಿಗೆ ಗಾಯಗಳಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. 


ಇದನ್ನೂ ಓದಿ- LPG Cylinder Insurance: ಗ್ಯಾಸ್ ಸಿಲಿಂಡರ್‌ನಲ್ಲಿ 50 ಲಕ್ಷದವರೆಗಿನ ಅಪಘಾತ ವಿಮೆ ಸೌಲಭ್ಯ, ಯಾವಾಗ, ಹೇಗೆ ಸಿಗುತ್ತೆ ಗೊತ್ತಾ?


ಈ ಕುರಿತಂತೆ ಪಂಜಾಬ್ ಪೊಲೀಸರು (Punjab Police) ಮಾಹಿತಿ ನೀಡಿದ್ದು, ಪವನ್ ಜಿಂಗ್ರಾನ್ ಗ್ರಾಮದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಬಸ್ ಪಲ್ಟಿಯಾಗಿ ರಸ್ತೆಯಿಂದಾಚೆ ಹೊಲಕ್ಕೆ ಬಿದ್ದಿದೆ ಎಂದು ತಿಳಿಸಿದ್ದಾರೆ. 


ಇದನ್ನೂ ಓದಿ- Accident: ಕಾರಿಗೆ ಡಿಕ್ಕಿ ಹೊಡೆದು ತಪ್ಪಿಸಿಕೊಳ್ಳುತ್ತಿದ್ದ ವೇಳೆ ಫ್ಲೈ ಓವರ್ ನಿಂದ ನೆಲಕ್ಕೆ ಅಪ್ಪಳಿಸಿದ ಲಾರಿ


ಘಟನೆ ಸಂಬಂಧ ಮಾಹಿತಿ ಹಂಚಿಕೊಂಡಿರುವ ದಸುಯಾದ ಪೊಲೀಸ್ ಉಪ ಅಧೀಕ್ಷಕ  ಜತೀಂದರ್ ಸಿಂಗ್, ಈ ಘಟನೆಯಲ್ಲಿ ಸಣ್ಣ-ಪುಟ್ಟ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. 26 ವರ್ಷದ ಪುರುಷ ಮತ್ತು 55 ವರ್ಷದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಅಮೃತಸರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.