CAA: ಈ ಮೂರು ರಾಜ್ಯಗಳಲ್ಲಿ ಜಾರಿಯಾಗುವುದಿಲ್ಲ ಸಿಎಎ, ಮುಖ್ಯಮಂತ್ರಿಗಳು ಹೇಳಿದ್ದೇನು?

Citizenship (Amendment) Act: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳನ್ನು ಜಾರಿಗೆ ತಂದಿದೆ. ಆದರೆ, ಇದೊಂದು ಎಲೆಕ್ಷನ್ ಗಿಮಿಕ್ ಎಂದು ಬಣ್ಣಿಸಿರುವ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿ ಸಿಎಎ ಜಾರಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

Written by - Yashaswini V | Last Updated : Mar 15, 2024, 01:03 PM IST
  • ಲೋಕಸಭಾ ಚುನಾವಣೆ 2024ಕ್ಕೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಈ ನಡೆಯನ್ನು ಹಲವು ಪಕ್ಷಗಳು ವಿರೋಧಿಸಿವೆ.
  • ಪೌರತ್ವ ತಿದ್ದುಪಡಿ ಕಾಯ್ದೆ ಒಂದು ಎಲೆಕ್ಷನ್ ಗಿಮಿಕ್ ಎಂದು ವಿರೋಧ ಪಕ್ಷಗಳು ಬಣ್ಣಿಸಿವೆ.
CAA: ಈ ಮೂರು ರಾಜ್ಯಗಳಲ್ಲಿ ಜಾರಿಯಾಗುವುದಿಲ್ಲ ಸಿಎಎ, ಮುಖ್ಯಮಂತ್ರಿಗಳು ಹೇಳಿದ್ದೇನು?  title=

Citizenship (Amendment) Act: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು  ಮಾರ್ಚ್ 11 ರಂದು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (Citizenship (Amendment) Act) ಜಾರಿಗೊಳಿಸಿದೆ.  ಆದರೆ, ಈ ಕಾಯ್ದೆ ಇಡೀ ದೇಶದಲ್ಲಿ ಜಾರಿಯಾಗಲಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. 

ವಾಸ್ತವವಾಗಿ, ಲೋಕಸಭಾ ಚುನಾವಣೆ 2024ಕ್ಕೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಈ ನಡೆಯನ್ನು ಹಲವು ಪಕ್ಷಗಳು ವಿರೋಧಿಸಿದ್ದು ಇದೊಂದು ಎಲೆಕ್ಷನ್ ಗಿಮಿಕ್ ಎಂದು ಬಣ್ಣಿಸಿವೆ. ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (Citizenship (Amendment) Act) ಜಾರಿಗೆ ತರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಮೊದಲಿಗೆ (ಮಾರ್ಚ್ 13) ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು. ಇದು ಸಾರ್ವತ್ರಿಕ ಚುನಾವಣೆಯ ಹಿಂದಿನ ಗಿಮಿಕ್ ಮತ್ತು ಸಿಎಎ ಅಡಿಯಲ್ಲಿ ಯಾರಾದರೂ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ತಕ್ಷಣ ಆ ವ್ಯಕ್ತಿ 'ಅಕ್ರಮ ವಲಸಿಗ' ವರ್ಗಕ್ಕೆ ಸೇರುತ್ತಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು. 

ಇದನ್ನೂ ಓದಿ- CAA: ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ಮಾರ್ಗ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಕೇರಳದಲ್ಲಿ ಪುರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಘೋಷಿಸಿದ್ದಾರೆ. ಅಷ್ಟೇ ಅಲ್ಲ, "ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವುದಿಲ್ಲ ಎಂದು ಖಚಿತಪಡಿಸಲು ಎಲ್ಡಿಎಫ್ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆಹೋಗಿದೆ". ಗಮನಾರ್ಹವಾಗಿ ಸಿಎಎ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ಮೊದಲ ರಾಜ್ಯ ಕೇರಳ. 

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ರಾಜ್ಯಸಭಾ ಸಂಸದ ಮತ್ತು ಸಿಪಿಐ ಕೇರಳ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ ಅವರು ಸಿಎಎ ಅನುಷ್ಠಾನವನ್ನು ಪ್ರಶ್ನಿಸಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, "ಸಿಎಎ ನಿಬಂಧನೆಗಳು ನಮ್ಮ ಸಂವಿಧಾನದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿವೆ ಮತ್ತು ಭಾರತೀಯ ಸಮಾಜದ ಒಳಗೊಳ್ಳುವ ಫ್ಯಾಬ್ರಿಕ್ಗೆ ವಿರುದ್ಧವಾದ ಈ ಅಪಾಯಕಾರಿ ಕಾನೂನಿನ ಅನುಷ್ಠಾನವನ್ನು ತಡೆಯಲು ನಾವು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದೇವೆ" ಎಂದಿದ್ದಾರೆ. 

ಇದನ್ನೂ ಓದಿ- CAA ಜಾರಿಗೊಳಿಸಿದ Modi Government, ಏನಿದು ಸಿಎಎ, ಇಲ್ಲಿದೆ ಅದರ ಕಂಪ್ಲೇಟ್ ಮಾಹಿತಿ

ಪಶ್ಚಿಮಬಂಗಾಳ, ಕೇರಳ ಹೊರತುಪಡಿಸಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ತಮ್ಮ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News