ಚುನಾವಣಾ ಅಧಿಸೂಚನೆಗೆ ಒಪ್ಪಿಗೆ ನೀಡಿದ ಕೇಂದ್ರ ಸಚಿವ ಸಂಪುಟ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಚುನಾವಣಾ ಆಯೋಗದ ಅಧಿಸೂಚನೆಗೆ ಒಪ್ಪಿಗೆ ನೀಡಲಾಗಿದೆ.

Last Updated : Mar 13, 2019, 06:47 PM IST
 ಚುನಾವಣಾ ಅಧಿಸೂಚನೆಗೆ ಒಪ್ಪಿಗೆ ನೀಡಿದ ಕೇಂದ್ರ ಸಚಿವ ಸಂಪುಟ title=
ಸಾಂದರ್ಭಿಕ ಚಿತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಚುನಾವಣಾ ಆಯೋಗದ ಅಧಿಸೂಚನೆಗೆ ಒಪ್ಪಿಗೆ ನೀಡಲಾಗಿದೆ.

ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 14(2) ರ ಅಡಿಯಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ 2019ಗಾಗಿ ಚುನಾವಣಾ ಆಯೋಗ ಹೊರಡಿಸಿದ್ದ ಅಧಿಸೂಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಚುನಾವಣಾ ವೇಳಾಪಟ್ಟಿ ಹಾಗೂ ಪ್ರಕ್ರಿಯೆ ಎಲ್ಲವೂ ಕೂಡ ಚುನಾವಣಾ ಆಯೋಗದ ಶಿಫಾರಸ್ಸಿನ ಅನುಗುಣವಾಗಿ ನಡೆಯಲು ಈ ಕಾಯ್ದೆ ಅನುವು ಮಾಡಿಕೊಡುತ್ತದೆ.

ಭಾನುವಾರದಂದು ಚುನಾವಣಾ ಆಯೋಗವು 17ನೇ ಲೋಕಸಭಾ ಚುನಾವಣೆಗಾಗಿ ವೇಳಾಪಟ್ಟಿಯನ್ನು ಘೋಷಣೆ ಮಾಡಿತ್ತು.ಇದರನ್ವಯ ಏಪ್ರಿಲ್ 11 ರಂದು ಲೋಕಸಭಾ ಚುನಾವಣೆ ನಡೆಯಲಿದೆ.ಅಂತಿಮ ಫಲಿತಾಂಶ ಮೇ 23 ರಂದು ಹೊರಬಿಳಲಿದೆ. 

ಪ್ರಸಕ್ತ ಲೋಕಸಭಾ ಅವಧಿ ಜೂನ್ ಮೂರದಂದು ಮುಕ್ತಾಯಗೊಳ್ಳಲಿದೆ.ಈ ಹಿನ್ನಲೆಯಲ್ಲಿ ಈಗ ಚುನಾವಣಾ ಆಯೋಗವು ವೇಳಾ ಪಟ್ಟಿಯನ್ನು ಘೋಷಣೆ ಮಾಡಿದೆ.

 

Trending News