ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆ ನಡೆಸಲು ಅನುಮತಿ ನೀಡಿದ್ದ ಕಲ್ಕತ್ತಾ ಹೈಕೋರ್ಟ್​ನ ಏಕಸದಸ್ಯ ಪೀಠದ ಆದೇಶವನ್ನು ಮುಖ್ಯ ನ್ಯಾಯಾಧೀಶರನ್ನೊಳಗೊಂಡ ವಿಭಾಗೀಯ ಪೀಠ ವಜಾಗೊಳಿಸಿದೆ.


COMMERCIAL BREAK
SCROLL TO CONTINUE READING

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥ ಯಾತ್ರೆ ನಡೆಸಲು ಅನುಮತಿ ನೀಡಿ ಕಲ್ಕತ್ತಾ ಹೈಕೋರ್ಟ್​ನ ಏಕಸದಸ್ಯ ಪೀಠ ಗುರುವಾರ ತೀರ್ಪು ಪ್ರಕಟಿಸಿತ್ತು. ಹೈಕೋರ್ಟ್​ನ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿತ್ತು.


ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೇಬಶೀಶ್​ ಕರ್ಗಪುತ ಮತ್ತು ನ್ಯಾಯಮೂರ್ತಿ ಶಂಪಾ ಸರ್ಕಾರ್​ ಅವರಿದ್ದ ವಿಭಾಗೀಯ ಪೀಠ ಪ್ರಕರಣವನ್ನು ಏಕಸದಸ್ಯ ಪೀಠಕ್ಕೆ ವಹಿಸಿದ್ದು, ರಾಜ್ಯ ಸರ್ಕಾರದ ಗುಪ್ತಚರ ಇಲಾಖೆ ನೀಡುವ ವರದಿಯನ್ನು ಆಧರಿಸಿ ಪ್ರಕರಣವನ್ನು ಇತ್ಯರ್ಥಗೊಳಿಸುವಂತೆ ಸೂಚಿಸಿದೆ.