ಪ.ಬಂಗಾಳದಲ್ಲಿ ಅಮಿತ್ ಶಾ ರಥಯಾತ್ರೆಗೆ ಅನುಮತಿ ನಿರಾಕರಿಸಿದ ಕಲ್ಕತ್ತಾ ಹೈಕೋರ್ಟ್

ಕಲ್ಕತ್ತಾ ಹೈಕೋರ್ಟ್ ಗುರುವಾರದಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಥ ಯಾತ್ರೆಗೆ ನಿರಾಕರಿಸಿದೆ.ಈ ಯಾತ್ರೆ ರಾಜ್ಯದಲ್ಲಿ ಕೋಮುಗಲಭೆಗೆ ಕಾರಣವಾಗಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

PTI | Updated: Dec 6, 2018 , 06:14 PM IST
ಪ.ಬಂಗಾಳದಲ್ಲಿ ಅಮಿತ್ ಶಾ ರಥಯಾತ್ರೆಗೆ ಅನುಮತಿ ನಿರಾಕರಿಸಿದ ಕಲ್ಕತ್ತಾ ಹೈಕೋರ್ಟ್

ನವದೆಹಲಿ: ಕಲ್ಕತ್ತಾ ಹೈಕೋರ್ಟ್ ಗುರುವಾರದಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಥ ಯಾತ್ರೆಗೆ ನಿರಾಕರಿಸಿದೆ.ಈ ಯಾತ್ರೆ ರಾಜ್ಯದಲ್ಲಿ ಕೋಮುಗಲಭೆಗೆ ಕಾರಣವಾಗಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಬಿಜೆಪಿಯ ಕೂಚಬೆಹಾರ್ ದಲ್ಲಿನ ರಥಯಾತ್ರೆಯನ್ನು ಮುಂದಿನ ವಿಚಾರಣೆ ಜನವರಿ 9,2019 ರವರೆಗೆ ಇದನ್ನು ಸ್ಥಗಿತಗೊಳಿಸಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ. ರಾಜ್ಯ ಅಡ್ವೋಕೇಟ್ ಜನರಲ್ ಕಿಶೋರ್ ದತ್ತಾ ಕೂಚ್ಬೆಹಾರ್ ರಲ್ಲಿನ ಎಸ್ಪಿ ಶುಕ್ರವಾರದಿಂದ ಪ್ರಾರಂಭವಾಗುವ ಬಿಜೆಪಿ ರಥಯಾತ್ರೆಗೆ ಅವಕಾಶ ನೀಡಲು ನಿರಾಕರಿಸಿದ್ದಾರೆ ಎಂದು ಕೋರ್ಟ್ ಗೆ ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ  ಅಮಿತ್ ಶಾ ಅವರು  ಪ್ರಜಾಪ್ರಭುತ್ವ ಉಳಿಸಿ ಎನ್ನುವ ಘೋಷಣೆಯೊಂದಿಗೆ ಮೂರು ರಥಯಾತ್ರೆಗಳನ್ನು ಹಮ್ಮಿಕೊಂಡಿದ್ದರು.ಈಗ ಆದರೆ ಈ ಯಾತ್ರೆಯಿಂದ ಕೋಮುಗಲಭೆ ಉಂಟಾಗಬಹುದು ಎನ್ನುವ ಕಾರಣಕ್ಕಾಗಿ ರಥಯಾತ್ರೆಗೆ ನಿರಾಕರಿಸಲಾಗಿದೆ.ಇನ್ನೊಂದೆಡೆಗೆ ಕೋರ್ಟ್ ನ ಈ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.