JOB: Canara Bank ​ನಲ್ಲಿ 220 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ  220 ವಿಶೇಷ ಅಧಿಕಾರಿ ಹುದ್ದೆ ಭರ್ತಿ

Last Updated : Nov 22, 2020, 06:49 PM IST
  • ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 220 ವಿಶೇಷ ಅಧಿಕಾರಿ ಹುದ್ದೆ ಭರ್ತಿ
  • ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಎಂಸಿಎ ವಿದ್ಯಾರ್ಹತೆ
  • ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ
JOB: Canara Bank ​ನಲ್ಲಿ 220 ಹುದ್ದೆಗಳಿಗೆ ಅರ್ಜಿ ಆಹ್ವಾನ! title=

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ  220 ವಿಶೇಷ ಅಧಿಕಾರಿ(Special officer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಸಿಬಹುದಾಗಿ ತಿಳಿಸಿದೆ.

ವಿದ್ಯಾರ್ಹತೆ: ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಎಂಸಿಎ ವಿದ್ಯಾರ್ಹತೆಯನ್ನುಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

CBSE 12th Practical Exam Date: ಸಿಬಿಎಸ್ಇ 12ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಯ ದಿನಾಂಕ ಘೋಷಣೆ

ವಯೋಮಿತಿ: ವಿಶೇಷ ಅಧಿಕಾರಿ ಹುದ್ದೆಗಳಿಗೆ ಅಕ್ಟೋಬರ್ 1, 2020ರ ಅನ್ವಯ ಕನಿಷ್ಟ 22 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ-ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ: ತಿಂಗಳಿಗೆ 23,700/- ರಿಂದ 51,490/-ರೂ

India Post Recruitment 2020: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ, 2582 ಹುದ್ದೆಗಳು ಖಾಲಿ

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ. ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳು 600ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಡಲಾಗುತ್ತದೆ.

2024ರ ಲೋಕಸಭಾ ಚುನಾವಣೆ ಮೇಲೆ ಬಿಜೆಪಿ ಕಣ್ಣು: ‘ಬ್ಲೂಪ್ರಿಂಟ್’ ತಯಾರಿಸಿದ ನಡ್ಡಾ!

ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.canarabank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15,2020೦ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Trending News