ಬಿಕಾನೆರ್:  ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದು, ಐದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದ ದೇಶೋಕ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿ -49 ರಲ್ಲಿ ಈ ಅಪಘಾತ ಸಂಭವಿಸಿದೆ. "ಇಂದು ಬೆಳಿಗ್ಗೆ ಹೆದ್ದಾರಿಯಲ್ಲಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದರು ಮತ್ತು ಐದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಐವರಲ್ಲಿ ಇಬ್ಬರು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕುಮಾರ್ ಪಾಲ್ ಗೌತಮ್ ಎಎನ್‌ಐಗೆ ತಿಳಿಸಿದ್ದಾರೆ.


ಅಪಘಾತದಲ್ಲಿ ಸಾವನ್ನಪ್ಪಿದ ಏಳು ಜನರಲ್ಲಿ ಕನಿಷ್ಠ ನಾಲ್ಕು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ. ಅಪಘಾತ ವರದಿಯಾದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದರು. ಅಪಘಾತದಲ್ಲಿ ಮೃತಪಟ್ಟವರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಬಿಕಾನೆರ್ ಪೊಲೀಸರು ತಿಳಿಸಿದ್ದಾರೆ.


ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸರ ಪ್ರಕಾರ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.