ನವದೆಹಲಿ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರವಾಗಿ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಇಂದು(ಏಪ್ರಿಲ್ 3) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.


COMMERCIAL BREAK
SCROLL TO CONTINUE READING

ತಮಿಳುನಾಡಿನಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗಾಗಿ ತೀವ್ರಗೊಳ್ಳುತ್ತಿರುವ ಹೋರಾಟದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬನ್ವರಿಲಾಲ್ ಪುರೋಹಿತ್ ಪ್ರಧಾನಿ ಮೋದಿಯನ್ನು ಭೇಟಿಯಾಗುತ್ತಿದ್ದು, ಈ ವೇಳೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಬಗ್ಗೆ ಚರ್ಚಿಸಲಿದ್ದಾರೆ.


ಏಪ್ರಿಲ್ 5ಕ್ಕೆ ತಮಿಳುನಾಡು ಬಂದ್
ಕೇಂದ್ರ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಾಯಿಸಿ ಡಿಎಂಕೆ ಏಪ್ರಿಲ್ 5ರಂದು ತಮಿಳುನಾಡು ಬಂದ್ ಗೆ ಕರೆ ನೀಡಿದೆ. ಡಿಎಂಕೆ ಕಾರ್ಯದರ್ಶಿ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ಬಂದ್ ಕರೆನೀಡಲಾಗಿದೆ. 


ಏತನ್ಮಧ್ಯೆ, ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿಲ್ಲ. 'ಸ್ಕೀಂ' ಎಂದರೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಎಂದರ್ಥವಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.