ಸಿಬಿಐ ವಿವಾದ: ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಗೆ ಖರ್ಗೆ ಮೊರೆ

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ರಜೆಗೆ ಕಳುಹಿಸುವ ಕೇಂದ್ರದ ನಿರ್ಧಾರ ಪ್ರಶ್ನಿಸಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸುಪ್ರಿಂಕೋರ್ಟ್ಗೆ ಮೊರೆ ಹೋಗಿದ್ದಾರೆ. 

Last Updated : Nov 3, 2018, 04:17 PM IST
ಸಿಬಿಐ ವಿವಾದ: ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಗೆ ಖರ್ಗೆ ಮೊರೆ  title=

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ರಜೆಗೆ ಕಳುಹಿಸುವ ಕೇಂದ್ರದ ನಿರ್ಧಾರ ಪ್ರಶ್ನಿಸಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಸುಪ್ರಿಂಕೋರ್ಟ್ಗೆ ಮೊರೆ ಹೋಗಿದ್ದಾರೆ. 

ಇತ್ತೀಚಿಗೆ ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ರಜೆಯ ಮೇಲೆ ಕಳುಹಿಸಿತ್ತು ಈಗ ಕಾಂಗ್ರೆಸ್ ನ ಸಂಸದೀಯ ನಾಯಕ ಖರ್ಗೆ ಇದನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದಾರೆ.ಈ ಸರ್ಕಾರದ ಆದೇಶ ಅಕ್ರಮವಾದ್ದು ಮತ್ತು ಸಿಬಿಐ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಖರ್ಗೆ ತಮ್ಮ ಅರ್ಜಿಯಲ್ಲಿ ಕಾನೂನಿನ ಪ್ರಕಾರ ವಿರೋಧ ಪಕ್ಷದ ನಾಯಕ, ಪ್ರಧಾನಿ ,ಮತ್ತು  ಮುಖ್ಯನ್ಯಾಯಮೂರ್ತಿಗಳನ್ನು ಒಳಗೊಂಡಿರುವ ಮೂವರು ಸದಸ್ಯರನ್ನು ಒಳಗೊಂಡ ಸಮಿತಿ ಮಾತ್ರ ಸಿಬಿಐ ನಿರ್ದೇಶಕರನ್ನು ತೆಗೆದುಹಾಕಲು ಸಾಧ್ಯ ಎಂದು ತಿಳಿಸಿದ್ದರೆ.ಇದೇ ವೇಳೆ ಸಿಬಿಐ ನಿರ್ದೇಶಕರ ವಿರುದ್ಧ ಕೇಂದ್ರ ವಿಜಿಲೆನ್ಸ್ ಕಮಿಷನ್ (ಸಿವಿಸಿ) ಕೂಡ ಯಾವುದೇ ಅಧಿಕಾರವನ್ನು ಹೊಂದಿಲ್ಲ ಎಂದು ಹೇಳಿದರು.

ಈ ವಿಚಾರವಾಗಿ ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಮಲ್ಲಿಕಾರ್ಜುನ್ ಖರ್ಗೆ "ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ರಜೆಯ ಮೇರೆಗೆ ಕಳುಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮವು ಕಾನೂನು ಬಾಹಿರವಾಗಿದೆ ಮತ್ತು ಸಿಬಿಐ ಕಾಯಿದೆ ಉಲ್ಲಂಘನೆಯಾಗಿದೆ" ಎಂದು ಖರ್ಗೆ ಪಿಟಿಐಗೆ ತಿಳಿಸಿದರು. 

Trending News