ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ, ಆದೇಶವನ್ನು ಮರುಪರಿಶೀಲಿಸುವಂತೆ ಸಿಬಿಐ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸಿದೆ.


COMMERCIAL BREAK
SCROLL TO CONTINUE READING

ಪಿ.ಚಿದಂಬರಂ ಅವರು ಪ್ರಕರಣದ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರಿಗೆ ನೀಡಲಾಗಿರುವ ಜಾಮೀನನ್ನು ರದ್ದುಪಡಿಸುವಂತೆ ಸಿಬಿಐ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದೆ.


ಪ್ರಸ್ತುತ ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ವಶದಲ್ಲಿರುವ ಪಿ.ಚಿದಂಬರಂ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.


ಮತ್ತೊಂದೆಡೆ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಇತ್ತೀಚೆಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕೋರಿ ಇಡಿ ಸುಪ್ರೀಂಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.


ಸಿಬಿಐ ದಾಖಲಿಸಿರುವ ಐಎನ್‌ಎಕ್ಸ್ ಮಾಧ್ಯಮ ಭ್ರಷ್ಟಾಚಾರ ಪ್ರಕರಣದಲ್ಲಿ ಎರಡು ತಿಂಗಳ ಜೈಲುವಾಸ ಅನುಭವಿಸಿರುವ ಚಿದಂಬರಂಗೆ ಮಂಗಳವಾರವಷ್ಟೇ ಜಾಮೀನು ನೀಡಲಾಗಿದ್ದು, ಈ ಬೆನ್ನಲ್ಲೇ ಸಿಬಿಐ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ.