ಸರ್ಕಾರದ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಬುಧವಾರ ಸುಪ್ರೀಂಕೋರ್ಟಿಗೆ ಮನವಿ ಮಾಡಿದ್ದಾರೆ. 

Last Updated : Oct 24, 2018, 12:38 PM IST
ಸರ್ಕಾರದ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ title=
Pic: DNA

ನವದೆಹಲಿ: ತನಿಖಾ ಸಂಸ್ಥೆ ಸಿಬಿಐನ ಆಂತರಿಕ ಯುದ್ಧ ಈಗ ನ್ಯಾಯಾಲಯಕ್ಕೆ ತಲುಪಿದೆ. ಹಠಾತ್ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿ ರಾಕೇಶ್ ಅಸ್ತಾನಾ ಅವರನ್ನು ರಜೆಯಲ್ಲಿ ತೆರಳುವಂತೆ ಅದೇಶಿಸಿತ್ತು. ಇದೀಗ ಅಲೋಕ್ ವರ್ಮಾ ನ್ಯಾಯಾಲಯದ ಮೆಟ್ಟಿಲೇರಿದ್ದು, ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರವು ಅಸಂವಿಧಾನಿಕವಾಗಿದೆ ಎಂದು ಅಲೋಕ್ ವರ್ಮಾ ಅವರ ವಕೀಲರು ನ್ಯಾಯಾಲಯದಲ್ಲಿ ತಿಳಿಸಿದರು. 

ಶುಕ್ರವಾರ ಅರ್ಜಿ ವಿಚಾರಣೆ:
ಅಲೋಕ್ ಕೇಂದ್ರ ಸರ್ಕಾರದ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಲಿದೆ ಎಂದು ಅಲೋಕ್ ವರ್ಮಾ ಪರ ವಕೀಲರು ಹೇಳಿದರು.

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿ ರಾಕೇಶ್ ಅಸ್ತಾನಾ ಈ ಇಬ್ಬರು ಮುಖ್ಯ ಅಧಿಕಾರಿಗಳ ಹಗ್ಗ-ಜಗ್ಗಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಇತಿಹಾದಲ್ಲೇ ಮೊದಲ ಬಾರಿಗೆ ಎನ್ನುವ ಹಾಗೆ ಅತ್ಯುನ್ನತಾ ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ರಜೆ ನೀಡಲಾಗಿದೆ. ಸಿಬಿಐ ಕೇಂದ್ರದಲ್ಲಿ ನಡೆಯುತ್ತಿರುವ ಭ್ರಷ್ಟಚಾರದ ಮುಸುಕಿನ ಗುದ್ದಾಟಕ್ಕೆ ತೆರೆ ಎಳೆಯುವ ಸಲುವಾಗಿ ಕೇಂದ್ರ ಸಚಿವಾಲಯ ನೇಮಕಾತಿ ಸಮಿತಿ ಸದ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ನಾಗೇಶ್ವರ್​ ರಾವ್​ ಅವರನ್ನು ನಿರ್ದೇಶಕರಾಗಿ ಅಧಿಕಾರವಹಿಸಿಕೊಳ್ಳುವಂತೆ ಆದೇಶ ಮಾಡಿದೆ.

Trending News