ಕೊಲ್ಕತಾ: ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ವಿರುದ್ಧ ಸಿಬಿಐ ಲುಕ್ ಔಟ್ ನೋಟಿಸ್ ಜಾರಿ ಮಾಡಲಿದ್ದು, ರಾಜೀವ್ ಕುಮಾರ್ ವಿರುದ್ಧದ ಸಾಕ್ಷ್ಯಗಳೊಂದಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಲು ನಿರ್ಧರಿಸಿದೆ. 


COMMERCIAL BREAK
SCROLL TO CONTINUE READING

ಶಾರದಾ ಚಿಟ್ ಫಂಡ್ ಹಗರಣ ಪ್ರಕರಣದಲ್ಲಿ ಸಿಬಿಐ ರಾಜೀವ್ ಕುಮಾರ್ ಅವರನ್ನು ವಿಚಾರಣೆ ನಡೆಸಲು ಬಯಸಿದೆ. ಆದರೆ ರಾಜೀವ್ ಕುಮಾರ್ ಈ ವಿಚಾರಣೆಯನ್ನು ತಪ್ಪಿಸುತ್ತಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಇದೇ ವೇಳೆ ರಾಜೀವ್ ಕುಮಾರ್ ಅವರು ವಿಚಾರಣೆಗೆ ಸಿಬಿಐನಿಂದ 1 ತಿಂಗಳ ಸಮಯವನ್ನು ಕೋರಿದ್ದು, ಇದಕ್ಕೆ ಸಿಬಿಐ ನಿರಾಕರಿಸಿದೆ. 


ಸೆಪ್ಟೆಂಬರ್ 13ರಂದು ಕೋಲ್ಕತ್ತಾ ಹೈಕೋರ್ಟ್ ಶಾರದಾ ಚಿಟ್ ಫಂಡ್ ಹಗರಣ ಪ್ರಕರಣದಲ್ಲಿ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಬಂಧಿಸದಂತೆ ನೀಡಿದ್ದ ರಕ್ಷಣೆಯನ್ನು ಹಿಂಪಡೆದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಹಿರಿಯ ಐಪಿಎಸ್ ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ್ದು, ಬಂಧನದ ಭೀತಿ ಎದುರಾಗಿದೆ.