10th-12 Exam Latest Update: ಆಫ್‌ಲೈನ್‌ನಲ್ಲಿ ಮಾತ್ರ ನಡೆಯುತ್ತವೆ CBSE 10th-12th ಪರೀಕ್ಷೆಗಳು : ಸುಪ್ರೀಂ ಕೋರ್ಟ್

10 ಮತ್ತು 12ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ತರ ತೀರ್ಪು ನೀಡಿದೆ. . 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.

Written by - Ranjitha R K | Last Updated : Feb 23, 2022, 03:54 PM IST
  • ಆನ್‌ಲೈನ್ ಪರೀಕ್ಷೆ ನಡೆಸುವಂತೆ ಕೋರಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು
  • ಆನ್‌ಲೈನ್ ಪರೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಳ್ಳಿ ಹಾಕಿದ ಕೋರ್ಟ್
  • 10 ಮತ್ತು 12 ನೇ ಪರೀಕ್ಷೆಗಳು ಏಪ್ರಿಲ್ 26 ರಿಂದ ಪ್ರಾರಂಭ
 10th-12 Exam Latest Update:  ಆಫ್‌ಲೈನ್‌ನಲ್ಲಿ ಮಾತ್ರ ನಡೆಯುತ್ತವೆ CBSE 10th-12th ಪರೀಕ್ಷೆಗಳು  : ಸುಪ್ರೀಂ ಕೋರ್ಟ್   title=
ಆನ್‌ಲೈನ್ ಪರೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಳ್ಳಿ ಹಾಕಿದ ಕೋರ್ಟ್ (file photo)

ನವದೆಹಲಿ : 10 ಮತ್ತು 12ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ತರ ತೀರ್ಪು ನೀಡಿದೆ. . 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE Exam Latest Update) ನಡೆಸಲಿರುವ 10 ಮತ್ತು 12 ನೇ ತರಗತಿಯ 'ಆಫ್‌ಲೈನ್' ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಐಸಿಎಸ್‌ಇ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ನಡೆಸುವ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೂಡಾ ನ್ಯಾಯಾಲಯ ವಜಾಗೊಳಿಸಿದೆ.

ಆನ್‌ಲೈನ್ ಪರೀಕ್ಷೆ ನಡೆಸುವಂತೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು :
10 ಮತ್ತು 12ನೇ ತರಗತಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ (Supreme court)ಅರ್ಜಿ ಸಲ್ಲಿಸಲಾಗಿದ್ದು, ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಒತ್ತಾಯಿಸಲಾಗಿತ್ತು. ಕಳೆದ ವರ್ಷದಂತೆ ಪರೀಕ್ಷೆ ನಡೆಸಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು (CBSE Exam Latest Update). 

ಇದನ್ನೂ ಓದಿ : ಹೆಣ್ಣು ಮಗು ಜನಿಸಿದರೆ ಈ ರಾಜ್ಯದಲ್ಲಿ ಸರ್ಕಾರ ನೀಡುತ್ತದೆ 21 ಸಾವಿರ ರೂಪಾಯಿ

ಈ ಅರ್ಜಿಗಳು ವಿದ್ಯಾರ್ಥಿಗಳ ಹಾಡಿ ತಪ್ಪಿಸುತ್ತಿವೆ ಮಾತ್ರವಲ್ಲ ವಿದ್ಯಾರ್ಥಿಗಳಿಗೆ ಸುಳ್ಳು ಭರವಸೆ ನೀಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್, ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಸಿ.ಟಿ.ರವಿಕುಮಾರ್ ಅವರಿದ್ದ ಪೀಠವು ಈ ಅರ್ಜಿಯನ್ನು ಪರಿಗಣಿಸುವುದು ಎಂದರೆ ಇನ್ನಷ್ಟು ಗೊಂದಲವನ್ನು ಸೃಷ್ಟಿಸುತ್ತದೆ ಎಂದರ್ಥ ಎಂದು ಹೇಳಿದೆ. ಈಗಾಗಲೇ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೆಸರಿನಲ್ಲಿ ಈ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಮೂಡಿಸಿದ್ದಾಗಿದೆ ಎಂದು ಕೋರ್ಟ್ (Supreme court) ಹೇಳಿದೆ. 

 ಏಪ್ರಿಲ್ 26 ರಿಂದ ಪರೀಕ್ಷೆ ಪ್ರಾರಂಭ : 
ಇತರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು CBSE ಹಾಗೂ ವಿವಿಧ ಶಿಕ್ಷಣ ಮಂಡಳಿಗಳಿಗೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿತ್ತು. CBSE ಮತ್ತು ಇತರ ಶಿಕ್ಷಣ ಮಂಡಳಿಗಳು 10 ನೇ ಮತ್ತು 12 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಆಫ್‌ಲೈನ್ ಮೋಡ್ ಮೂಲಕ ನಡೆಸಲು ಪ್ರಸ್ತಾಪಿಸಿವೆ. CBSE ಏಪ್ರಿಲ್ 26 ರಿಂದ 10 ಮತ್ತು 12 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲಿದೆ.

ಇದನ್ನೂ ಓದಿ : 'ಉತ್ತರ ಪ್ರದೇಶದ ಜನರ ಅಭಿವೃದ್ಧಿಯು ಭಾರತದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ -ಪ್ರಧಾನಿ ಮೋದಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News