CBSE Board Exams 2021 - For Class 10th Cancelled & 12th postponed - ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) 10ನೇ ಹಾಗೂ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು (CBSE 10th 12th Exam 2021,) ರದ್ದುಗೊಳಿಸುವ ಬೇಡಿಕೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶಿಕ್ಷಣ ಸಚಿವರು ಹಾಗೂ ಇತರ ಅಧಿಕಾರಿಗಳ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ದೇಶಾದ್ಯಂತ ಹೆಚ್ಚಾಗುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ನಡುವೆಯೇ, ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಈ ಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. CBSE 10ನೇ ತರಗತಿಯ ಪರೀಕ್ಷೆ ರದ್ದುಗೊಳಿಸಲಾಗಿದ್ದರೆ, 12ನೇ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ. 10ನೇ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲಾಗುವುದು ಎಂದು ಈ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದೆ ವೇಳೆ 12ನೇ ತರಗತಿಯ ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ. ಮುಂಬರುವ ಜೂನ್ 1 ರಂದು ಪರಿಶೀಲನೆ ನಡೆಸಿದ ಬಳಿಕ ಇದನ್ನು ನಿರ್ಧರಿಸಲಾಗುವುದು ಎನ್ನಲಾಗಿದೆ. ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ 15 ದಿನಗಳ ಮುಂಚಿತವಾಗಿ ನೋಟಿಸ್ ನೀಡಲಾಗುವುದು ಎಂದು ತಿಳಿಸಲಾಗಿದೆ 


COMMERCIAL BREAK
SCROLL TO CONTINUE READING

ಮೇ 4 ರಿಂದ ಜೂನ್ 14 ರವರೆಗೆ ಪರೀಕ್ಷೆಗಳನ್ನು ಆಯೋಜಿಸಲು ನಿರ್ಧರಿಸಲಾಗಿತ್ತು
ಇದಕ್ಕೂ ಮೊದಲು CBSE 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಮೇ 4, 2021 ರಿಂದ ನಡೆಸಲು ನಿರ್ಧರಿಸಲಾಗಿತ್ತು. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ ಕೂಡ 10ನೇ ಮತ್ತು 12ನೇ ತರಗತಿಯ ಮುಂದೂಡುವಂತೆ ಮನವಿ ಮಾಡಿತ್ತು. ಈ ಕುರಿತು ಶಿಕ್ಷಣ ಸಚಿವಾಲಯಕ್ಕೆ ಅಸೋಸಿಯೇಷನ್ ಪತ್ರ ಕೂಡ ಬರೆದಿತ್ತು. ಈ ಬಾರಿಯ ಬೋರ್ಡ್ ಪರೀಕ್ಷೆಗಳಲ್ಲಿ ಸುಮಾರು 30 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಕೊರೊನಾ ಮಹಾಮಾರಿಯ ಹಿನ್ನೆಲೆ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳಲ್ಲಿ #CancelBoardExam2021 ಕ್ಯಾಂಪೇನ್ ಕೂಡ ನಡೆಸುತ್ತಿದ್ದಾರೆ. 


CBSE Exam Date Sheet 2021: CBSE 10ನೇ ಮತ್ತು 12ನೇ ತರಗತಿ ಪರೀಕ್ಷೆಗಳ Date Sheet ಬಿಡುಗಡೆ, ಹೀಗೆ ಡೌನ್ಲೋಡ್ ಮಾಡಿ


ದೆಹಲಿಯಲ್ಲಿ ಹೆಚ್ಚಾಗುತ್ತಿರುವ ಕೊರೊನಾ ವೈರಸ್ (Covid-19) ಪ್ರಕರಣಗಳ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೆಜ್ರಿವಾಲ್ (Arvind Kejriwal) ಅವರು, CBSE ಬೋರ್ಡ್ ಪರೀಕ್ಷೆಗಳನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಪರೀಕ್ಷೆಗಳನ್ನು ರದ್ದು ಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದ ಸಿಎಂ ಅರವಿಂದ್ ಕೆಜ್ರಿವಾಲ್ ಮತ್ತು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಪರೀಕ್ಷಾ ಕೇಂದ್ರಗಳು ವೈರಸ್ (Coronavirus) ಸೋಂಕನ್ನು ಹರಡಿಸುವಲ್ಲಿ ಸಹಾಯಕ ಸಾಬೀತಾಗುವ ಸಾಧ್ಯತೆ ಇದೆ ಎಂದಿದ್ದರು.


ಇದನ್ನೂ ಓದಿ- CBSE Board Exam 2021: CBSE ಹೊಸ ನಿಯಮ, ಈ ಪರೀಕ್ಷೆಯಲ್ಲಿ ಯಾರಿಗೂ ಕೂಡ Fail ಮಾಡಲಾಗುವುದಿಲ್ಲ


ಇನ್ನೊಂದೆಡೆ ಈ ಕುರಿತು ಮಾಹಿತಿ ನೀಡಿರುವ CBSE ಮಂಡಳಿಯ ಅಧಿಕಾರಿಗಳು ಇದುವರೆಗೆ ನಿಗದಿತ ವೇಳಾಪಟ್ಟಿಯಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡಲಾಗಿಲ್ಲ  ಎಂದಿದ್ದು, ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಶೇ.50 ರಷ್ಟು ಹೆಚ್ಚಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದಿದ್ದರು. ಈ ಕುರಿತು ಮಾಹಿತಿ ನೀಡಿರುವ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು, ಪರೀಕ್ಷೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ಇವುಗಳ ವಿಧಾನ ಭಿನ್ನವಾಗಿದೆ ಮತ್ತು ಆನ್ಲೈನ್ ನಲ್ಲಿ ಇವುಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ- CBSE Board Exams: ಬೋರ್ಡ್ ಪರೀಕ್ಷೆ ರದ್ದುಗೊಳಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಮನವಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.