ಸರ್ಟಿಫಿಕೇಶನ್ ಇಂಜಿನಿಯರ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಸಿಇಐಎಲ್) 109 ಇಂಜಿನಿಯರ್, ಮ್ಯಾನೇಜರ್, ಅಧಿಕಾರಿ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ceil.co.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.


COMMERCIAL BREAK
SCROLL TO CONTINUE READING

ವಿದ್ಯಾರ್ಹತೆ: ಡಿಪ್ಲೋಮಾ, ಪದವಿ, ಗ್ರಾಜುಯೇಶನ್, ಎಂಬಿಎ(MBA) ಅಥವಾ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


Modi ಸರ್ಕಾರದ ಮಹತ್ವಾಕಾಂಕ್ಷೆಯ Central Vista Redevelopment Planಗೆ SC ಹಸಿರು ನಿಶಾನೆ


ವಯೋಮಿತಿ: ನವೆಂಬರ್‌ 30,2020ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಆಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.


Covaxin Vaccine ಅನ್ನು'ನೀರು' ಎಂದು ಕರೆದ ಪೂನಾವಾಲಾಗೆ ಕೃಷ್ಣಾ ಇಲ್ಲಾ ತಿರುಗೇಟು


ವೇತನ: ಹುದ್ದೆಗಳಿಗನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,250/- ರಿಂದ 85,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.


ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


ಈ ರಾಜ್ಯದಲ್ಲಿ ಯುವತಿಯರಿಗೆ ಸರ್ಕಾರದಿಂದ ಉಚಿತವಾಗಿ ಸಿಗಲಿದೆ Scooters


ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ recruit.hr1@ceil.co.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


COVID-19 ಲಸಿಕೆಗಾಗಿ ನೋಂದಾಯಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.