ನವದೆಹಲಿ: ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ದ್ವೇಷದ ಮಾತು, ನಕಲಿ ಸುದ್ದಿ, ಮಾನಹಾನಿ ಬಗೆಗಿನ ಪೋಸ್ಟ್‌ಗಳು ಮತ್ತು ರಾಷ್ಟ್ರ ವಿರೋಧಿ ಚಟುವಟಿಕೆ ಕಾರ್ಯಗಳ ನಿಯಂತ್ರಣಕ್ಕೆ ನಿಯಮಗಳನ್ನು ರೂಪಿಸಲು ಕೇಂದ್ರ ಸರ್ಕಾರ ಸುಪ್ರೀಂಕೋರ್ಟಗೆ ಮೂರು ತಿಂಗಳ ಹೆಚ್ಚಿನ ಕಾಲಾವಕಾಶ ಕೇಳಿದೆ.


COMMERCIAL BREAK
SCROLL TO CONTINUE READING

ಇಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅಂತಹ ಸಂದೇಶಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸಲು ಅಂತರ್ಜಾಲ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಹೆಚ್ಚಿನ ನಿಯಂತ್ರಣ ಅಗತ್ಯವಾಗಿದೆ ಎಂದು ಸರ್ಕಾರ ಹೇಳಿದೆ. ಈ ನಿಟ್ಟಿನಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸುಪ್ರೀಂಕೋರ್ಟ್ ಸರ್ಕಾರವನ್ನು ಕೇಳಿದ ನಂತರ ಅಫಿಡವಿಟ್ ಸಲ್ಲಿಸಲಾಗಿದೆ.


ದೇಶದ ಸಾರ್ವಭೌಮತ್ವ, ವ್ಯಕ್ತಿಯ ಗೌಪ್ಯತೆ ಮತ್ತು ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ಶಿಫಾರಸುಗಳನ್ನು ಮಾಡಲು ಕಳೆದ ತಿಂಗಳು ಸುಪ್ರೀಂಕೋರ್ಟ್ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿತು. ಇದಾದ ನಂತರ ಕೇಂದ್ರ ಸುಪ್ರೀಂಕೋರ್ಟ್ ಗೆ ಹೆಚ್ಚಿನ ಮೂರು ತಿಂಗಳ ಕಾಲಾವಕಾಶವನ್ನು ಕೇಳಿದೆ. ಒಂದು ಕಡೆ ತಂತ್ರಜ್ಞಾನವು ಆರ್ಥಿಕ ಬೆಳವಣಿಗೆಗೆ ಕಾರಣವಾಗಿದೆ. ಮತ್ತೊಂದೆಡೆ ನಕಲಿ ಸುದ್ದಿಗಳು ಇತ್ಯಾದಿಗಳಲ್ಲಿ ಭಾರಿ ಏರಿಕೆ ಕಂಡುಬಂದಿದೆ.


ಅಂತರ್ಜಾಲವು ಪ್ರಜಾಪ್ರಭುತ್ವಕ್ಕೆ ಸವಾಲಾಗಿ ಹೊರಹೊಮ್ಮಿದೆ ಎಂದು ಕೇಂದ್ರದ ಅಫಿಡವಿಟ್ನಲ್ಲಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಪರಿಣಾಮಕಾರಿ ನಿಯಮಗಳನ್ನು ರೂಪಿಸುವ ಅವಶ್ಯಕತೆಯಿದೆ, ವೈಯಕ್ತಿಕ ಹಕ್ಕುಗಳು ಮತ್ತು ರಾಷ್ಟ್ರದ ಸಮಗ್ರತೆ, ಸಾರ್ವಭೌಮತ್ವ ಮತ್ತು ಭದ್ರತೆಗೆ ನಿರಂತರವಾಗಿ ಬೆಳೆಯುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ನಿಯಮಗಳನ್ನು ಅಂತಿಮಗೊಳಿಸಲು ಇನ್ನೂ ಮೂರು ತಿಂಗಳುಗಳು ಅಗತ್ಯವಿದೆ ಕೇಂದ್ರ ಎಂದು ತಿಳಿಸಿದೆ.


ಸೆಪ್ಟೆಂಬರ್ 24 ರಂದು, ಈ ವಿಷಯವನ್ನು ಆಲಿಸುತ್ತಿರುವ ಇಬ್ಬರು ನ್ಯಾಯಾಧೀಶರ ಪೀಠದ ಮುಖ್ಯಸ್ಥರಾಗಿರುವ ನ್ಯಾಯಮೂರ್ತಿ ದೀಪಕ್ ಗುಪ್ತಾ, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಕೆಲವು ದುಷ್ಕೃತ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.