ಲೋಕಸಭೆ, ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿಗೆ ಕೇಂದ್ರ ಅನುಮೋದನೆ..?!
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಸೀಟುಗಳನ್ನು ಮೀಸಲಿಡುವ ಮಸೂದೆಗೆ ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಸರ್ಕಾರವು ಅದನ್ನು ಇನ್ನೂ ಅಧಿಕೃತವಾಗಿ ಘೋಷಿಸಬೇಕಿದೆ.
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಸೀಟುಗಳನ್ನು ಮೀಸಲಿಡುವ ಮಸೂದೆಗೆ ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಸರ್ಕಾರವು ಅದನ್ನು ಇನ್ನೂ ಅಧಿಕೃತವಾಗಿ ಘೋಷಿಸಬೇಕಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್ ನೀಡಿದ ಎಐಎಡಿಎಂಕೆ..!
ಈ ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ನೀಡಿದ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಸಭೆಯು ಕುತೂಹಲವನ್ನು ಹೆಚ್ಚಿಸಿತ್ತು. ಅದಕ್ಕೂ ಮುನ್ನ ಪ್ರಮುಖ ಸಭೆಗಳನ್ನು ಸಹ ನಡೆಸಲಾಯಿತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಸಭೆಯಲ್ಲಿ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಕೂಡ ಉಪಸ್ಥಿತರಿದ್ದರು.
ಇದನ್ನೂ ಓದಿ: ಕಾವೇರಿ ನೀರು:ಯಡಿಯೂರಪ್ಪನವರದ್ದು ರಾಜಕೀಯ ಹೇಳಿಕೆ-ಸಿಎಂ ಸಿದ್ದರಾಮಯ್ಯ
ಮಹಿಳೆಯರಿಗೆ ಅಥವಾ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ, ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ದೇಶದ ಹೆಸರು ಬದಲಾವಣೆಯಂತಹ ನಿರ್ಧಾರಗಳನ್ನು ಕ್ಯಾಬಿನೆಟ್ ತೆರವುಗೊಳಿಸಬಹುದು ಎಂಬ ಊಹಾಪೋಹವಿತ್ತು.ಆದರೆ ಸರ್ಕಾರ ಈ ಎಲ್ಲ ವಿಷಯಗಳ ವಿಚಾರವಾಗಿ ಅಧಿಕೃತವಾಗಿ ಘೋಷಣೆ ಹೊರಡಿಸಬೇಕಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.