Coronavirus ಪ್ರಕರಣ ಏಕಾಏಕಿ ಹೆಚ್ಚಾದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ವಿಶೇಷ ಸೂಚನೆ

ಗೃಹ ಸಚಿವಾಲಯದ ಅಧಿಕಾರಿಯೊಬ್ಬರು, ದೇಶದಲ್ಲಿ ಕರೋನಾವೈರಸ್‌ನ ಪರಿಸ್ಥಿತಿಯನ್ನು ಗೃಹ ಸಚಿವರು ಪರಿಶೀಲಿಸಿದ್ದಾರೆ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದಾರೆ ಎಂದು ಹೇಳಿದರು.

Written by - Yashaswini V | Last Updated : Feb 23, 2021, 07:55 AM IST
  • ದೇಶದಲ್ಲಿ ಹೆಚ್ಚುತ್ತಿರುವ ಕರೋನಾವೈರಸ್ ಪ್ರಕರಣಗಳು ಸರ್ಕಾರದ ಕಳವಳವನ್ನು ಹೆಚ್ಚಿಸಿವೆ
  • ಐದು ರಾಜ್ಯಗಳಲ್ಲಿ ಕರೋನಾ ಪ್ರಕರಣಗಳು ಇದ್ದಕ್ಕಿದ್ದಂತೆ ಹೆಚ್ಚಾಗಿದೆ
  • ಏತನ್ಮಧ್ಯೆ ದೇಶದಲ್ಲಿ ಕರೋನಾವೈರಸ್‌ನ ಪರಿಸ್ಥಿತಿಯನ್ನು ಗೃಹ ಸಚಿವರು ಪರಿಶೀಲಿಸಿದ್ದಾರೆ
Coronavirus ಪ್ರಕರಣ ಏಕಾಏಕಿ ಹೆಚ್ಚಾದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ವಿಶೇಷ ಸೂಚನೆ  title=
Corona cases increase : Home Minister Amit Shah gave these instructions to officers

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕರೋನಾವೈರಸ್ ಪ್ರಕರಣಗಳು ಸರ್ಕಾರದ ಕಳವಳವನ್ನು ಹೆಚ್ಚಿಸಿವೆ. ಏತನ್ಮಧ್ಯೆ, ಕೆಲವು ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಹಠಾತ್ತನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಸೋಮವಾರ ದೇಶದ ಕೋವಿಡ್ -19 (Covid 19) ಪರಿಸ್ಥಿತಿಯನ್ನು ಪರಿಶೀಲಿಸಿದರು. ಪರಿಶೀಲನಾ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ ಹರ್ಷ್ ವರ್ಧನ್, ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು ಎರಡೂ ಸಚಿವಾಲಯಗಳ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.

ಅಧಿಕಾರಿಗಳೊಂದಿಗೆ ಅಮಿತ್ ಶಾ ಸಭೆ :
ಗೃಹ ಸಚಿವಾಲಯದ ಅಧಿಕಾರಿಯೊಬ್ಬರು, ದೇಶದಲ್ಲಿ ಕರೋನಾವೈರಸ್‌ನ ಪರಿಸ್ಥಿತಿಯನ್ನು ಗೃಹ ಸಚಿವ ಅಮಿತ್ ಶಾ (Amit Shah) ಅವರು ಪರಿಶೀಲಿಸಿದ್ದಾರೆ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದಾರೆ. ಸಭೆಯಲ್ಲಿ ನಡೆಯುತ್ತಿರುವ ವ್ಯಾಕ್ಸಿನೇಷನ್ ಪ್ರಕ್ರಿಯೆ ಮತ್ತು ಕರೋನಾವೈರಸ್ (Coronavirus) ಮತ್ತಷ್ಟು ಹರಡುವುದನ್ನು ತಡೆಯಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು.

5 ರಾಜ್ಯಗಳಲ್ಲಿ ಕರೋನಾ ಪ್ರಕರಣಗಳು ಇದ್ದಕ್ಕಿದ್ದಂತೆ ಹೆಚ್ಚಾಗಿದೆ :
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಕೋವಿಡ್ -19 (Covid 19) ಪ್ರಕರಣಗಳಲ್ಲಿ ಹಠಾತ್ ಹೆಚ್ಚಳ ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಕರೋನಾ ಸೋಂಕಿನ ಎರಡನೇ ತರಂಗದ ಭಯ ಮತ್ತು ಕೇರಳದಲ್ಲಿ ಹೆಚ್ಚುತ್ತಿರುವ ಪ್ರಕರಣಗಳು ದೇಶದಲ್ಲಿ ಗಂಭೀರ ಸಾಂಕ್ರಾಮಿಕ ಪರಿಸ್ಥಿತಿಗೆ ಕಾರಣವಾಗುತ್ತಿದೆ. ಸತತ ಎರಡನೇ ದಿನ ಸೋಮವಾರ 14 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1.5 ಲಕ್ಷ ಮೀರಿದೆ. ಆದಾಗ್ಯೂ, ಕರೋನಾದಿಂದ ಸಾವನ್ನಪ್ಪುವವರ ದೈನಂದಿನ ಸಂಖ್ಯೆ 100 ಕ್ಕಿಂತ ಕಡಿಮೆ ಇರುವುದು ಸಮಾಧಾನಕರ ಸಂಗತಿಯಾಗಿದೆ.

ಇದನ್ನೂ ಓದಿ - ಶೀಘ್ರದಲ್ಲಿಯೇ ಶ್ರೀಸಾಮಾನ್ಯರ Vaccination ಅಭಿಯಾನ, ಈ ದಿನ ಶುರು ಆಗುವ ಸಾಧ್ಯತೆ

ಈ ನಗರದಲ್ಲಿ ಲಾಕ್‌ಡೌನ್ :
ಹೆಚ್ಚುತ್ತಿರುವ ಕರೋನಾವೈರಸ್ ಪ್ರಕರಣಗಳ ಮಧ್ಯೆ ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿವೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊರಗಿನಿಂದ ಬರುವವರ ಬಗ್ಗೆ ತನಿಖೆ ತೀವ್ರಗೊಳಿಸಲಾಗಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಸೋಮವಾರದಿಂದ ಒಂದು ವಾರದವರೆಗೆ ಲಾಕ್‌ಡೌನ್ (Lockdown) ವಿಧಿಸಲಾಗಿದೆ.

ಇದನ್ನೂ ಓದಿ - Dr K Sudhakar: ಮತ್ತೆ ಮರುಕಳಿಸುತ್ತಾ ಲಾಕ್ ಡೌನ್ ದಿನಗಳು? ರಾಜ್ಯ ಸರ್ಕಾರ ಮಹತ್ವದ ನಿರ್ಧಾರ!

ಈ ಎರಡು ರಾಜ್ಯಗಳಲ್ಲಿ ಅತಿ ಹೆಚ್ಚು ಪ್ರಕರಣಗಳು :
ಸೆಂಟ್ರಲ್ ಹೆಲ್ತ್ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಕರೋನದ ಸಕ್ರಿಯ ಪ್ರಕರಣಗಳ ಸಂಖ್ಯೆ 1,50,055 ಕ್ಕೆ ಏರಿದೆ, ಇದು ಒಟ್ಟು ಪ್ರಕರಣಗಳಲ್ಲಿ 1.36 ಶೇಕಡಾ. ಈ ಶೇಕಡಾ 74 ರಷ್ಟು ಸಕ್ರಿಯ ಪ್ರಕರಣಗಳು ಕೇವಲ ಎರಡು ರಾಜ್ಯಗಳಲ್ಲಿ ಅಂದರೆ ಮಹಾರಾಷ್ಟ್ರ ಮತ್ತು ಕೇರಳದಲ್ಲಿವೆ. ಮಹಾರಾಷ್ಟ್ರದಲ್ಲಿ ಮಾತ್ರವೇ 52,956 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News