ನವದೆಹಲಿ: ಗಾಂಧಿ ಕುಟುಂಬವು ಇನ್ನು ಮುಂದೆ ವಿಶೇಷ ಸಂರಕ್ಷಣಾ ಗುಂಪು (ಎಸ್‌ಪಿಜಿ) ವ್ಯಾಪ್ತಿಯಿಂದ ಹಿಂತೆಗೆದುಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಈಗ ಜೆಡ್ ಪ್ಲಸ್ ವಿಭಾಗದ ರಕ್ಷಣೆ ಇರುತ್ತದೆ. ಆದರೆ ಈ ಬಗ್ಗೆ ಅವರಿಗೆ ಮಾಹಿತಿ ನೀಡಿಲ್ಲ ಎಂದು ಗಾಂಧಿ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.


ಇತ್ತೀಚೆಗೆ ಭದ್ರತಾ ಪರಿಶೀಲನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಜೆಡ್ ಪ್ಲಸ್ ಭದ್ರತೆ ಎಂದರೆ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸುಮಾರು 100 ಸಿಬ್ಬಂದಿಗಳಿಂದ ಅದರ ವ್ಯಾಪ್ತಿಗೆ ಬರುವ ವ್ಯಕ್ತಿಗಳಿಗೆ ಭದ್ರತೆ ಒದಗಿಸುವುದು.


ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ನಂತರ ಎಸ್‌ಪಿಜಿ ವ್ಯಾಪ್ತಿಗೆ ಒಳಪಟ್ಟಿರುವ ಗಾಂಧಿ ಕುಟುಂಬ ಸದಸ್ಯರಿಗೆ ಈಗ ಭದ್ರತೆ ಮಟ್ಟವನ್ನು ಕೆಳಗಿಳಿಸಲಾಗುತ್ತಿದೆ.