Central Vista ಯೋಜನೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಬಿತ್ತು ₹ 1ಲಕ್ಷ ದಂಡ!
ಇಂದು ಅರ್ಜಿ ವಜಾಗೊಳಿಸಿರುವ ದೆಹಲಿ ಹೈಕೋರ್ಟ್
ನವದೆಹಲಿ : ಪ್ರಸ್ತುತ ದೇಶ ಕೊರೋನಾ ಸಂಕಷ್ಟದಲ್ಲಿ ಸೆಂಟ್ರಲ್ ವಿಸ್ತಾ ಬೃಹತ್ ಕಟ್ಟಡ ಕಾಮಗಾರಿಗೆ ತಡೆ ನೀಡಬೇಕೆಂಬ ಅರ್ಜಿಯನ್ನು ಇಂದು ವಜಾಗೊಳಿಸಿರುವ ದೆಹಲಿ ಹೈಕೋರ್ಟ್, ಇದೊಂದು ಅಗತ್ಯವಾಗಿರುವ ರಾಷ್ಟ್ರೀಯ ಯೋಜನೆಯಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಅಲ್ಲದೇ ಅರ್ಜಿದಾರರಿಗೆ 1 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.
ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ನಡೆಯುತ್ತಿರುವ ಸೆಂಟ್ರಲ್ ವಿಸ್ತಾ ಕಾಮಗಾರಿ ಯೋಜನೆ(Central Vista project) ಸ್ಥಗಿತಗೊಳಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ನೇತೃತ್ವದ ಪೀಠ ಇಂದು (ಮೇ 31) ತೀರ್ಪು ನೀಡುವುದಾಗಿ ತಿಳಿಸಿತ್ತು.
ಇದನ್ನೂ ಓದಿ : 7th Pay Commission: ತಂದೆ ತಾಯಿ ಸಾವಿನ ನಂತರ ಮಕ್ಕಳಿಗೆ ಪ್ರತಿ ತಿಂಗಳು 1.25 ಲಕ್ಷ ಪಿಂಚಣಿ
ಈಗಾಗಲೇ ಗುರುತಿಸಲಾಗಿರುವ ಪ್ರದೇಶದಲ್ಲಿ ಸೆಂಟ್ರಲ್ ವಿಸ್ತಾ ಕಟ್ಟಡ ಕಾಮಗಾರಿ ನಡಯುತ್ತಿದೆ. ಈ ಸಂದರ್ಭದಲ್ಲಿ ಯೋಜನೆಗೆ ತಡೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೈಕೋರ್ಟ್(Delhi High Court) ಪೀಠ ಸ್ಪಷ್ಟಪಡಿಸಿದ್ದು, ಇದೊಂದು ಪ್ರೇರೇಪಣೆಯ ಅರ್ಜಿ ಎಂದು ಹೇಳಿ ದೂರುದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದೆ.
ಕರೋನಾ ಆರ್ಭಟ ಇಳಿಮುಖ, ಜೂನ್ ತಿಂಗಳಲ್ಲಿ 10 ಕೋಟಿ ಕೊವಿಶೀಲ್ಡ್ ಲಭ್ಯ
ಇದೊಂದು ರಾಷ್ಟ್ರೀಯ ಅತ್ಯಗತ್ಯದ ಯೋಜನೆ(project of national importance). ಇದು ಬಹಳ ಮುಖ್ಯವಾದ ಯೋಜನೆ ಎಂದು ಸೆಂಟ್ರಲ್ ವಿಸ್ತಾ ಯೋಜನೆಯ ಕಾನೂನು ಬದ್ಧತೆಯನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ಈ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಕೇಂದ್ರ ಸರ್ಕಾರ 2021ರೊಳಗೆ ಪೂರ್ಣಗೊಳಿಸುವ ಯೋಜನೆಯಲ್ಲಿದೆ.
ಇದನ್ನೂ ಓದಿ : Loan For Covid-19 Treatment: ಕೋವಿಡ್ ಚಿಕಿತ್ಸೆಗೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಲಭ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ