ಗ್ವಾಲಿಯರ್ (ಮಧ್ಯಪ್ರದೇಶ): ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (Narendra Singh Tomar) ಅವರು ಭಾನುವಾರ ಕೃಷಿ ಕಾನೂನುಗಳನ್ನು (Farm laws) ಪರಿಚಯಿಸುವ ಯಾವುದೇ ಯೋಜನೆಯನ್ನು ಕೇಂದ್ರ ಹೊಂದಿಲ್ಲ ಎಂದು ಹೇಳಿದರು. ಕಾರ್ಯಕ್ರಮವೊಂದರಲ್ಲಿ ತಾವು ನೀಡಿದ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ತಿದ್ದುಪಡಿಗಳೊಂದಿಗೆ ಮೂರು ಕೃಷಿ ಕಾನೂನುಗಳನ್ನು (ಈಗ ರದ್ದುಗೊಳಿಸಲಾಗಿದೆ) ಮರಳಿ ತರಲು ಕೇಂದ್ರವು ಯೋಜಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ ಕೇಂದ್ರ ಸಚಿವರಿಂದ ಸ್ಪಷ್ಟನೆ ಬಂದಿದೆ.
"ಭಾರತ ಸರ್ಕಾರವು ರೈತರ ಅಭ್ಯುದಯಕ್ಕಾಗಿ ಕೃಷಿ ಸುಧಾರಣಾ ಕಾನೂನುಗಳನ್ನು ತಂದಿತ್ತು. ಭಾರತ ಸರ್ಕಾರ ಮತ್ತು ಪ್ರಧಾನಿ ರೈತರ ಚಳವಳಿಯನ್ನು ಕೊನೆಗೊಳಿಸುವ ಸಲುವಾಗಿ ಆ ಕಾನೂನುಗಳನ್ನು ಹಿಂಪಡೆದಿದ್ದಾರೆ" ಎಂದು ಹೇಳಿದರು.
"ಆಗ್ರೋ ವಿಷನ್ ಕಾರ್ಯಕ್ರಮದ ಸಂದರ್ಭದಲ್ಲಿ ನನ್ನ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ. ನಾವು ಕೃಷಿ ಕಾನೂನಿನ ನಿಲುವಿನಿಂದ ಹಿಂದೆ ಸರಿದಿದ್ದೇವೆ. ಆದರೆ ರೈತರ ಶ್ರೇಯೋಭಿವೃದ್ಧಿಗಾಗಿ ಭಾರತ ಸರ್ಕಾರವು ಮುಂದುವರಿಯುತ್ತದೆ ಎಂದು ನಾನು ಹೇಳಿದ್ದೇನೆ. ಯಾವುದೇ ತಪ್ಪು ತಿಳುವಳಿಕೆ ಬೇಡ. ಕೇಂದ್ರವು ಮತ್ತೆ ಕೃಷಿ ಕಾನೂನುಗಳನ್ನು ಪರಿಚಯಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ" ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ (Randeep Surjewala), "ತೋಮರ್ ಹೇಳಿಕೆಯಿಂದ ರೈತ ವಿರೋಧಿ ಮೂರು ಕಾನೂನನ್ನು ವಾಪಸ್ ತರುವ ಕೇಂದ್ರದ ಷಡ್ಯಂತ್ರ ಮತ್ತೊಮ್ಮೆ ಬಯಲಾಗಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಕೇಂದ್ರ ಸರಕಾರ ಹಿಂಪಡೆಯಲು ಮುಂದಾಗಿರುವುದು ಸ್ಪಷ್ಟವಾಗಿದೆ. ಹೊಸ ರೂಪದಲ್ಲಿ ಮೂರು ಕಪ್ಪು ಕಾನೂನುಗಳು ಮತ್ತು ಇದನ್ನು ಅವರು ಬಂಡವಾಳಶಾಹಿಗಳ ಒತ್ತಡದಲ್ಲಿ ಮಾಡುತ್ತಿದ್ದಾರೆ" ಎಂದು ಹೇಳಿದ್ದರು.
ನವೆಂಬರ್ 23 ರಂದು ಪ್ರಾರಂಭವಾದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಯಿತು.
ಇದನ್ನೂ ಓದಿ:
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.