ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ ಕ್ಯಾತೆ; ವರದಿ ತಿರಸ್ಕಾರ

ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಲ್ಲಿಸಿಲ್ಲ ಎಂದಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ದಾಖಲೆಗಳ ಪ್ರಮಾಣೀಕರಣದ ಸಮೇತ ಸಲ್ಲಿಸಲು ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿದೆ. 

Last Updated : Oct 4, 2019, 11:13 AM IST
ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ ಕ್ಯಾತೆ; ವರದಿ ತಿರಸ್ಕಾರ title=

ನವದೆಹಲಿ: ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ಕ್ಯಾತೆ ತೆಗೆದಿದ್ದು, ಪ್ರವಾಹದಿಂದ ಸುಮಾರು 38 ಸಾವಿರ ಕೋಟಿ ರೂ.ಗಳ ನಷ್ಟ ಸಂಭವಿಸಿದೆ ಎಂದು ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಶುಕ್ರವಾರ ತಿರಸ್ಕರಿಸಿದೆ ಎನ್ನಲಾಗಿದೆ.

ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಲ್ಲಿಸಿಲ್ಲ ಎಂದಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ದಾಖಲೆಗಳ ಪ್ರಮಾಣೀಕರಣದ ಸಮೇತ ಸಲ್ಲಿಸಲು ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿದೆ. 

ಜುಲೈ ತಿಂಗಳಿನಲ್ಲಿ ತೀವ್ರ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ರಾಜ್ಯದಲ್ಲಿ 38,405 ಕೋಟಿ ರೂ. ಹಾನಿಯಾಗಿದೆ ಎಂದು ಕೇಂದ್ರ ಸರಕಾರಕ್ಕೆ ಈ ಹಿಂದೆ ಮನವಿ ನೀಡಲಾಗಿತ್ತು. ಆದರೆ ಈ ಬಗ್ಗೆ ಕೇಂದ್ರ ಸರಕಾರ ಕೆಲ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮನವಿಯನ್ನು ಮರುಪರಿಷ್ಕರಿಸಿ 35161.81 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು.

ರಾಜ್ಯ ಸರ್ಕಾರ ಪ್ರವಾಹ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ಆರಂಭದಲ್ಲಿ ಸುಮಾರು 600 ಕೋಟಿ ಹಣ ಬಿಡುಗಡೆ ಮಾಡಿತ್ತು. ಸಂತ್ರಸ್ತರಿಗೆ ಹಣ ತಲುಪಿಸುವ ಕೆಲಸ ಸರ್ಕಾರವೇ ಮಾಡಿತ್ತು. ಸಂತ್ರಸ್ತರ ಹಣ ಮಧ್ಯವರ್ತಿಗಳ ಪಾಲಾಗದಂತೆ ತಡೆಯಲು ವಿಶೇಷ ತಂಡ ರಚನೆ ಮಾಡಲಾಗಿತ್ತು.

ರಾಜ್ಯದ ಪ್ರಸ್ತಾವನೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಕೇಂದ್ರ ತಂಡದ ವರದಿ ಸಲ್ಲಿಸಿದ್ದು, ಅದರಲ್ಲಿ ಪ್ರವಾಹದಿಂದ ಹಾನಿಗೀಡಾದ ಮನೆಗಳ ಸಂಖ್ಯೆ 1.15 ಲಕ್ಷ ಇದೆ. ಆದರೆ, ರಾಜ್ಯ ಸರ್ಕಾರ 2.50ಲಕ್ಷ ಮನೆಗಳು ಹಾನಿಗೀಡಾಗಿವೆ ಎಂದು ಪ್ರಸ್ತಾವನೆ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸ್ಪಷ್ಟನೆ ನೀಡುವಂತೆ ರಾಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. 
 

Trending News