ನವದೆಹಲಿ: ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಪ್ರಸ್ತಾವಿತ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ, 2021 ಅನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಆ ಮೂಲಕ ಈಗ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಗೆ ಭಾರಿ ಹಿನ್ನಡೆಯುಂಟಾಗಿದೆ.


COMMERCIAL BREAK
SCROLL TO CONTINUE READING

ನಗರದ ಚುನಾಯಿತ ಸರ್ಕಾರಕ್ಕೆ ಹೋಲಿಸಿದರೆ ಕೇಂದ್ರವನ್ನು ಪ್ರತಿನಿಧಿಸುವ ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ಗೆ ಈ ಮಸೂದೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ.ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಮತ್ತು ಕೇಂದ್ರದಲ್ಲಿ ಬಿಜೆಪಿ ನಡುವಿನ ವಿವಾದದ ಕುರಿತು 2018 ರಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಸಂವಿಧಾನ ಪೀಠದ ಹೊರತಾಗಿಯೂ ಈ ಮಸೂದೆಯನ್ನು ಮಂಡಿಸಲಾಗಿದೆ.


ಮಸೂದೆಯು ಸಂವಿಧಾನಕ್ಕೆ ಅನುಗುಣವಾಗಿ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಜವಾಬ್ದಾರಿಗಳನ್ನು ಮತ್ತಷ್ಟು ವ್ಯಾಖ್ಯಾನಿಸುತ್ತದೆ ಎಂದು ಸರ್ಕಾರ ಪ್ರತಿಪಾದಿಸಿತು.


ಇದನ್ನೂ ಓದಿ: ದೆಹಲಿಯಲ್ಲಿ ಜನರ ಆಡಳಿತವನ್ನು ಕೊನೆಗೊಳಿಸಲು ಕೇಂದ್ರ ಪ್ರಯತ್ನಿಸುತ್ತಿದೆ- ಕೇಜ್ರಿವಾಲ್


2020 ರ ದೆಹಲಿ ಚುನಾವಣೆಯಲ್ಲಿ 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆದ್ದ ಅರವಿಂದ್ ಕೇಜ್ರಿವಾಲ್ (Arvind Kejriwal)  ಅಧಿಕಾರಕ್ಕೆ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದರು.ಅವರು ಬಿಜೆಪಿ ಪ್ರಾಕ್ಸಿ ಮೂಲಕ ದೆಹಲಿಯನ್ನು ಆಳಲು ಪ್ರಯತ್ನಿಸುತ್ತಿದೆ ಆರೋಪಿಸಿದ್ದಾರೆ. ಶಾಸಕಾಂಗವು ರಚಿಸುವ ಯಾವುದೇ ಕಾನೂನಿನಲ್ಲಿ ಸರ್ಕಾರ ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಎಂದು ಹೊಸ ಮಸೂದೆ ಸ್ಪಷ್ಟಪಡಿಸುತ್ತದೆ, ದೆಹಲಿ ಸರ್ಕಾರವು ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ಅವರ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗುತ್ತದೆ.


ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಜಮೀನು ಹೊರತುಪಡಿಸಿ ಇತರ ವಿಷಯಗಳ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಅವರ ಒಪ್ಪಿಗೆ ಅಗತ್ಯವಿಲ್ಲ ಎಂದು 2018 ರಲ್ಲಿ ಸುಪ್ರೀಂಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ತೀರ್ಪು ನೀಡಿತ್ತು. ಆದರೆ ನಿರ್ಧಾರಗಳನ್ನು ಲೆಫ್ಟಿನೆಂಟ್ ರಾಜ್ಯಪಾಲರಿಗೆ ತಿಳಿಸಬೇಕಾಗಿದೆ ಎಂದು ಅದು ಹೇಳಿದೆ.


ಇದನ್ನೂ ಓದಿ: ವಿದ್ಯಾರ್ಥಿಗಳನ್ನು ಕಟ್ಟರ್ ದೇಶ ಭಕ್ತರನ್ನಾಗಿ ಮಾಡಲು ಸಿಎಂ ಕೇಜ್ರಿವಾಲ್ ಪ್ಲಾನ್ ರೆಡಿ...!


"ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಸ್ಥಾನಮಾನವು ರಾಜ್ಯದ ಗವರ್ನರ್ ಅಲ್ಲ, ಬದಲಿಗೆ ಅವರು ನಿರ್ವಾಹಕರಾಗಿ ಉಳಿದಿದ್ದಾರೆ, ಸೀಮಿತ ಅರ್ಥದಲ್ಲಿ, ಲೆಫ್ಟಿನೆಂಟ್ ಗವರ್ನರ್ ಹುದ್ದೆಯೊಂದಿಗೆ ಕೆಲಸ ಮಾಡುತ್ತಾರೆ" ಎಂದು ನ್ಯಾಯಪೀಠ ಹೇಳಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.