ಚಂಡಿಘಡ ವಿವಿ ವಿಡಿಯೋ ಕಿಚ್ಚು... ಇದರ ಹಿಂದಿನ ಅಸಲಿ ಕಥೆ ಏನು ಗೊತ್ತಾ..?

ವಿಡಿಯೋ ಲೀಕ್ ಪ್ರಕರಣ ಸಂಬಂಧ ವಿಡಿಯೋ ಚಿತ್ರೀಕರಿಸಿದ ವಿದ್ಯಾರ್ಥಿನಿಯನ್ನು ಮೊಹಾಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರೆ, ಆಕೆಯ ಬಾಯ್‌ಫ್ರೆಂಡ್‌ಅನ್ನು ಶಿಮ್ಲಾದಲ್ಲಿ ಬಂಧಿಸಲಾಗಿದೆ.

Written by - Puttaraj K Alur | Last Updated : Sep 21, 2022, 04:24 PM IST
  • ದೇಶದಾದ್ಯಂತ ಚರ್ಚೆಗೆ ಗ್ರಾಸವಾದ ಚಂಡಿಘಡ ವಿವಿ ಲೇಡಿಸ್ ಹಾಸ್ಟೆಲ್ ಬಾತ್‌ ರೂಂ ವಿಡಿಯೋ ಲೀಕ್
  • ಬಾಯ್‍ಫ್ರೆಂಡ್‍ ಬ್ಲ್ಯಾಕ್‍ಮೇಲ್‍ಗೆ ಹೆದರಿ ಸಹಪಾಠಿಗಳ ವಿಡಿಯೋ ಹರಿಬಿಟ್ಟಳಾ ವಿದ್ಯಾರ್ಥಿನಿ
  • ಚಂಡಿಘಡ ವಿವಿ ವಿವಾದದ ಬೆನ್ನಲ್ಲಿಯೇ ಕರ್ನಾಟಕದ ಲೇಡಿಸ್ ಹಾಸ್ಟೆಲ್‍ಗಳಲ್ಲಿ ಕಟ್ಟೆಚ್ಚರ
ಚಂಡಿಘಡ ವಿವಿ ವಿಡಿಯೋ ಕಿಚ್ಚು... ಇದರ ಹಿಂದಿನ ಅಸಲಿ ಕಥೆ ಏನು ಗೊತ್ತಾ..?  title=
Chandigarh University Video Leak Row

ಚಂಡಿಘಡ: ಚಂಡಿಘಡ ವಿಶ್ವವಿದ್ಯಾಲಯದ ಲೇಡಿಸ್ ಹಾಸ್ಟೆಲ್ ಬಾತ್‌ ರೂಂ ವಿಡಿಯೋ ಲೀಕ್ ಪ್ರಕರಣ ದೇಶದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಬಾಯ್‌ಫ್ರೆಂಡ್‌ ಬ್ಲ್ಯಾಕ್‌ಮೇಲ್‌ಗೆ ಹೆದರಿ ವಿದ್ಯಾರ್ಥಿನಿಯೋರ್ವಳು ತನ್ನ ಸಹಪಾಠಿಗಳು ಸ್ನಾನ ಮಾಡುವ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡದ್ದಳೆಂಬ ಆರೋಪ ಕೇಳಿಬಂದಿತ್ತು. ಇದರಿಂದ ಆತಂಕಕ್ಕೀಡಾದ ಕೆಲವು ವಿದ್ಯಾರ್ಥಿನಿಯವರು ಆತ್ಮಹತ್ಯೆಗೆ ಕೂಡ ಯತ್ನಿಸಿದ್ದರು. ಈ ಪ್ರಕರಣದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

 60 ವಿದ್ಯಾರ್ಥಿನಿಯರ ಸ್ನಾನ ಮಾಡುವ ವಿಡಿಯೋ ವೈರಲ್!

ಚಂಡಿಘಡ ವಿವಿಯ ವಿದ್ಯಾರ್ಥಿನಿಯೊಬ್ಬಳು ಇತರ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋಗಳನ್ನು ಹಂಚಿಕೊಂಡ ಆರೋಪ ಕೇಳಿಬಂದಿತ್ತು. 60ಕ್ಕೂ ಅಧಿಕ MMSಗಳು ಈ ವಿದ್ಯಾರ್ಥಿನಿಯ ಬಳಿ ಇವೆ ಎಂಬುದರ ಬಗ್ಗೆ ವರದಿಯಾಗಿತ್ತು. ಇದಕ್ಕೆ ಹೆದರಿದ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ರು. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ ಚಂಡಿಘಡ ವಿವಿಯಲ್ಲಿ ಭಾರೀ ಪ್ರತಿಭಟನೆ ಆರಂಭಗೊಂಡಿತ್ತು. ಸೋಷಿಯಲ್ ಮೀಡಿಯಾದಲ್ಲಿ #JusticeForCUGirls  #ChandigarhUniversity ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗಿದ್ದವು.

ಚಂಡಿಘಡ ವಿವಿ ವಿದ್ಯಾರ್ಥಿಗಳು ಸೇರಿದಂತೆ ದೇಶದಾದ್ಯಂತ ಈ ಬಗ್ಗೆ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು. ವಿದ್ಯಾರ್ಥಿನಿಯರ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿತ್ತು. ಈ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದ ಕಾಲೇಜು ಆಡಳಿತ ಮಂಡಳಿ ಹಾಗೂ ಪೊಲೀಸರು, ‘ಹಲವು ವಿದ್ಯಾರ್ಥಿನಿಯರ ವಿಡಿಯೋಗಳು ಬಹಿರಂಗವಾಗಿಲ್ಲ. ಕೇವಲ ಓರ್ವ ವಿದ್ಯಾರ್ಥಿನಿಯ ವಿಡಿಯೋ ಮಾತ್ರ ಸೋರಿಕೆಯಾಗಿದೆ. ಯಾವ ವಿದ್ಯಾರ್ಥಿನಿಯರು ಅಹಿತರ ಘಟನೆಗೆ ಕೈಹಾಕಿಲ್ಲ’ವೆಂದು ಹೇಳಿದ್ದರು.

ಇದನ್ನೂ ಓದಿ: Congress President Election : ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷರಾದರೆ ರಾಜಸ್ಥಾನದ ಸಿಎಂ ಸ್ಥಾನ ಯಾರಿಗೆ?

ಆದರೆ ಈ ಸ್ಪಷ್ಟನೆಯನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳು ಒಪ್ಪಿಕೊಂಡಿರಲಿಲ್ಲ. ಪರಿಸ್ಥಿತಿ ನಿಭಾಯಿಸಲು ಈ ರೀತಿಯ ಹೇಳಿಕೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರ ಜೀವಕ್ಕೆ ಅಪತ್ತು ಬಂದಿದೆ. ಹಲವಾರು ವಿದ್ಯಾರ್ಥಿನಿಯರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಮಾಡಲಾಗಿದೆ. ನೊಂದ ವಿದ್ಯಾರ್ಥಿನಿಯರಿಗೆ ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಿಲ್ಲಿಸುವುದಿಲ್ಲವೆಂದು ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದ್ದರು.

 ಬಾಯ್‌ಫ್ರೆಂಡ್‌ಗೆ ವಿಡಿಯೋ ಕಳಿಸಿದ್ದ ವಿದ್ಯಾರ್ಥಿನಿ

ವಿದ್ಯಾರ್ಥಿನಿಯರ ಹಾಸ್ಟೆಲ್ ವಿಡಿಯೋ ಲೀಕ್ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ವಿದ್ಯಾರ್ಥಿನಿ ಮತ್ತು ಆಕೆಯ ಬಾಯ್‌ಫ್ರೆಂಡ್‌ನ ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಬಾಯ್‌ಫ್ರೆಂಡ್‌ ಬೆದರಿಕೆಗೆ ಹೆದರಿ ತಾನು ವಿಡಿಯೋ ಲೀಕ್ ಮಾಡಿರುವುದಾಗಿ ಬಂಧಿತ ವಿದ್ಯಾರ್ಥಿನಿ ಪೊಲೀಸರ ಬಳಿ ಹೇಳಿಕೆ ನೀಡಿದ್ದಳು.

ವರದಿಗಳ ಪ್ರಕಾರ ಬಂಧಿತ ವಿದ್ಯಾರ್ಥಿನಿಗೆ ಆಕೆಯ ಬಾಯ್‌ಫ್ರೆಂಡ್ ಬ್ಲಾಕ್‌ಮೇಲ್‌ ಮಾಡಿದ್ದನಂತೆ. ‘ನನಗೆ ನಿಮ್ಮ ಕಾಲೇಜಿನ ವಿದ್ಯಾರ್ಥಿನಿಯರ ಸ್ನಾನದ ವಿಡಿಯೋಗಳು ಕಳುಹಿಸು. ಇಲ್ಲದಿದ್ದರೆ ನಿನ್ನ ಜೊತೆಗೆ ಏಕಾಂತದಲ್ಲಿರುವ ವಿಡಿಯೋವನ್ನು ನಾನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತೇನೆ’ ಅಂತಾ ಆಕೆಯ ಬಾಯ್‌ಫ್ರೆಂಡ್ ಹೆದರಿಸಿದ್ದನಂತೆ.‌  ಹೀಗಾಗಿ ವಿದ್ಯಾರ್ಥಿನಿಯರ ಬಾತ್‌ ರೂಂ ವಿಡಿಯೋ ಚಿತ್ರೀಕರಿಸಿಕೊಂಡು ಆಕೆ ಬಾಯ್‌ಫ್ರೆಂಡ್‌ಗೆ ಕಳುಹಿಸಿದ್ದಳೆಂದು ಆರೋಪಿಸಲಾಗಿದೆ.

ಇದನ್ನೂ ಓದಿ: PM CARES Fund : ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿ ರತನ್ ಟಾಟಾ : ಸಲಹಾ ಮಂಡಳಿಯಲ್ಲಿ ಸುಧಾಮೂರ್ತಿ

ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಚಂಡಿಘಡ ವಿವಿಯನ್ನು 1 ವಾರಗಳ ಕಾಲ ಬಂದ್ ಮಾಡಲಾಗಿದೆ. ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದ್ಯಾರ್ಥಿನಿಯರು ಭಯಭೀತರಾಗಿದ್ದು, ಹಾಸ್ಟೆಲ್ ತೊರೆದು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

ಪ್ರಕರಣ ಸಂಬಂಧ ವಿಡಿಯೋ ಚಿತ್ರೀಕರಿಸಿದ ವಿದ್ಯಾರ್ಥಿನಿಯನ್ನು ಮೊಹಾಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರೆ, ಆಕೆಯ ಬಾಯ್‌ಫ್ರೆಂಡ್‌ಅನ್ನು ಶಿಮ್ಲಾದಲ್ಲಿ ಬಂಧಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಉನ್ನತ ಮಟ್ಟದ ತನಿಖೆ ಕೈಗೊಂಡಿದ್ದಾರೆ. ಪಂಜಾಬ್ ಸಿಎಂ ಭಗವಂತ್ ಮಾನ್ ಈ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕದ ಹಾಸ್ಟೆಲ್‌ಗಳಲ್ಲಿ ಹೈ ಅಲರ್ಟ್!

ಚಂಡಿಘಡ ವಿಶ್ವಿವಿದ್ಯಾನಿಲಯದ ವಿದ್ಯಾರ್ಥಿನಿಯರ ವಿಡಿಯೋ ಲೀಕ್ ಪ್ರಕರಣ ವ್ಯಾಪಕ ಚರ್ಚೆಗೆ ಗ್ರಾಸವಾದ ಬೆನ್ನಲ್ಲಿಯೇ ಕರ್ನಾಟಕದ ವಿದ್ಯಾರ್ಥಿನಿಯರ ಹಾಸ್ಟೆಲ್‌ಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯಬಾರದು. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾಸ್ಟೆಲ್ ವಾರ್ಡನ್‌ಗಳಿಗೆ ಖಡಕ್ ಸೂಚನೆ ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News