Andhra Pradesh CM Oath Ceremony: ಇಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಚಂದ್ರಬಾಬು ನಾಯ್ಡು

Andhra Pradesh CM Oath Ceremony: 2024ರ ಆಂಧ್ರಪ್ರದೇಶ  ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಬುಧವಾರ ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

Written by - Yashaswini V | Last Updated : Jun 12, 2024, 09:39 AM IST
  • ನಾಲ್ಕನೇ ಬಾರಿಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಆಯ್ಕೆ
  • ಇಂದು ಎನ್ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸಮಾರಂಭ
  • ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಚಿರಂಜೀವಿ ಸೇರಿದಂತೆ ದಕ್ಷಿಣ ಭಾರತದ ಟಾಪ್ ಸ್ಟಾರ್‌ಗಳ ಆಗಮನ ಸಾಧ್ಯತೆ
Andhra Pradesh CM Oath Ceremony: ಇಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಚಂದ್ರಬಾಬು ನಾಯ್ಡು title=

Andhra Pradesh CM Oath Ceremony: ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ (Andhra Pradesh Assembly Elections)  ಭರ್ಜರಿ ಗೆಲುವು ದಾಖಲಿಸಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (Telugu Desam Party (TDP) chief N. Chandrababu Naidu) ಇಂದು (ಜೂನ್ 12) ನಾಲ್ಕನೇ ಬಾರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಯ್ಡು ಅವರೊಂದಿಗೆ ಜನಸೇನಾ ಪಕ್ಷದ (ಜೆಎಸ್‌ಪಿ) ಮುಖ್ಯಸ್ಥ ಪವನ್ ಕಲ್ಯಾಣ್ (Jana Sena Party (JSP) chief Pawan Kalyan) ಸೇರಿದಂತೆ ಇತರ ನಾಯಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೂಲಗಳ ಪ್ರಕಾರ ಪವನ್ ಕಲ್ಯಾಣ್ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  ವಿಜಯವಾಡದ ಹೊರವಲಯದಲ್ಲಿರುವ ಕೇಸರಪಲ್ಲಿಯಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಎದುರಿನ ಮೇಧಾ ಐಟಿ ಪಾರ್ಕ್ ಬಳಿ ಬೆಳಿಗ್ಗೆ 11:27 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. 

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು (Telugu Desam Party (TDP) chief N. Chandrababu Naidu) ಅವರೊಂದಿಗೆ ಜನಸೇನಾ ಪಕ್ಷದ (ಜೆಎಸ್‌ಪಿ) ಮುಖ್ಯಸ್ಥ ಪವನ್ ಕಲ್ಯಾಣ್ ಅವರಲ್ಲದೆ, ಹಿರಿಯ ಜೆಎಸ್‌ಪಿ ನಾಯಕ ಎನ್ ಮನೋಹರ್, ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಮತ್ತು ಟಿಡಿಪಿ ಆಂಧ್ರಪ್ರದೇಶ ನಾಯಕ ಅಚ್ಚನ್ನಾಯ್ಡು ಕೂಡ ಇಂದು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. 

ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಎನ್. ಚಂದ್ರಬಾಬು ನಾಯ್ಡು! 
ಮೊದಲು 1995ರಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಎನ್. ಚಂದ್ರಬಾಬು ನಾಯ್ಡು (Chief Minister of Andhra Pradesh N. Chandrababu Naidu), ಸತತ 2004ರವರೆಗೂ ಅಧಿಕಾರದಲ್ಲಿದ್ದರು. 2014 ರಲ್ಲಿ, ಚಂದ್ರಬಾಬು ನಾಯ್ಡು ವಿಭಜಿತ ಆಂಧ್ರಪ್ರದೇಶದ ಮೊದಲ ಸಿಎಂ ಆಗಿದ್ದರು ಮತ್ತು 2019 ರವರೆಗೆ ಸೇವೆ ಸಲ್ಲಿಸಿದರು. ಆದರೆ, 2019 ರಲ್ಲಿ ಚುನಾವಣೆಯಲ್ಲಿ ಸೋಲು ಕಂಡರು. ಇದೀಗ 2024ರ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಹಿಂದಿರುಗಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು, ಇಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. 

ಇದನ್ನೂ ಓದಿ- ಸಂಸತ್ತಿನ ಸೆಂಟ್ರಲ್ ಹಾಲ್‌ನ ಇತಿಹಾಸದ ಬಗ್ಗೆ ನಿಮಗೆಷ್ಟು ಗೊತ್ತು? ರಾಜಕೀಯ ಪಕ್ಷಗಳು ತಮ್ಮ ಕಾರ್ಯಕ್ರಮಗಳಿಗೆ ಬಳಸಬಹುದೇ?

ಆಂಧ್ರ ಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಲ್ಲಿ 135 ಸ್ಥಾನಗಳಲ್ಲಿ ಟಿಡಿಪಿ ಗೆಲುವು: 
2024ರ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ (2024 Andhra Pradesh Assembly Elections)ಯಲ್ಲಿ 175 ಸ್ಥಾನಗಳ ಪೈಕಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಡಿಪಿ ಭರ್ಜರಿ ಗೆಲುವು ಸಾಧಿಸಿದೆ. ಟಿಡಿಪಿಯ ಮಿತ್ರಪಕ್ಷವಾದ ಜನಸೇನಾ ಪಕ್ಷ 21 ಸ್ಥಾನಗಳಲ್ಲಿ ಮತ್ತು ಬಿಜೆಪಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ವೇಳೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿಗೆ ಭರ್ಜರಿ ಟಕ್ಕರ್ ನೀಡಿದ್ದ ವೈಎಸ್‌ಆರ್‌ಸಿಪಿಗೆ ಕೇವಲ 11 ಸ್ಥಾನಗಳು ಲಭಿಸಿವೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಚಿರಂಜೀವಿ: 
ಎನ್‌ಡಿಎ ಮಿತ್ರ ಪಕ್ಷದ ಭಾಗವಾಗಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ, ಪ್ರಧಾನಿ ನರೇಂದ್ರ ಮೋದಿ (Prime Minister Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಹಲವಾರು ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬಿಹಾರ ಸಿಎಂ ನಿತೀಶ್ ಕುಮಾರ್, ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಕೂಡ ಆಗಮಿಸುವ ನಿರೀಕ್ಷೆ ಇದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.  

ಇದನ್ನೂ ಓದಿ- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿವೆ ಈ ಅಚ್ಚರಿಯ ಹೆಸರುಗಳು..!

ಸಮಾರಂಭದಲ್ಲಿ ಚಿರಂಜೀವಿ ಪವನ್ ಕಲ್ಯಾಣ್ ಅವರ ಹಿರಿಯ ಸಹೋದರ ಮೆಗಾಸ್ಟಾರ್ ಚಿರಂಜೀವಿ ಮತ್ತು ಅವರ ಪುತ್ರ ರಾಮ್ ಚರಣ್, ರಜನಿಕಾಂತ್, ಅಲ್ಲು ಅರ್ಜುನ್ ಮತ್ತು ಮೋಹನ್ ಬಾಬು ಸೇರಿದಂತೆಸೇರಿದಂತೆ ದಕ್ಷಿಣ ಭಾರತದ ಟಾಪ್ ಸ್ಟಾರ್‌ಗಳು ಕೂಡ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News